Featured

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ – Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ – Vishwanews24

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಮಂಗಳವಾರ ಉಡುಪಿ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಮಹಿಳಾ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ ಸಿಗುವಂತಾಗಬೇಕು. ಅವರ ಬಗ್ಗೆ ಕೀಳರಿಮೆ ಮನೋಭಾವ ದೂರ ಮಾಡಬೇಕು. ಆ ರೀತಿಯ ಹೃದಯ ಶ್ರೀಮಂತಿಕೆ ಎಲ್ಲರಲ್ಲೂ ಮೂಡಿಬರ ಬೇಕಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ತಹಶೀಲಾರ್ ಫ್ಲೈಟ್ ಲೆಫ್ಟಿನೆಂಟ್ ಅರ್ಚನಾ ಭಟ್, ಉದ್ಯಮಿ ಮೊಹಮ್ಮದ್ ಮೌಲ, ಸಮಾಜ ಸೇವಕ ಅರಲ್ ಜಾನ್ ಡಿಸೋಜ ಮಾತನಾಡಿದರು. ಮಲಬಾರ್ ಗೋಲ್ಡ್ ನ ‘ಹೋಮ್ ಫಾರ್ ಹೋಮ್ ಲೆಸ್’ ಯೋಜನೆಯಡಿ ಆರು ಫಲಾನುಭವಿ ಗಳಿಗೆ ಒಟ್ಟು ನಾಲ್ಕು ಲಕ್ಷ ರೂ. ಸಹಾಯಧನದ ಚೆಕ್  ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಂಗೀತ ಕಲಾವಿದೆ ಕಲಾವತಿ ದಯಾನಂದ, ಪಿಡಿಓ ಫರ್ಜಾನ ಎಂ., ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ, ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ, ಸಾಮಾಜಿಕ ಕಾರ್ಯಕರ್ತೆ ಸುಮತಿ ನಾಯಕ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಜ್ ರೆಹಮಾನ್, ರಾಘವೇಂದ್ರ ನಾಯಕ್, ತಂಝಿಮ್ ಶಿರ್ವ, ಪುರಂದರ ತಿಂಗಳಾಯ ಉಪಸ್ಥಿತರಿದ್ದರು. ಸಂದೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago