Featured

ಉಡುಪಿ: ಮಲಬಾರ್ ಗೋಲ್ಡ್‌ ಅಂಡ್ ಡೈಮಂಡ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ -Vishwanews24

ಉಡುಪಿ: ಮಲಬಾರ್ ಗೋಲ್ಡ್‌ ಅಂಡ್ ಡೈಮಂಡ್ಸ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ -Vishwanews24

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಸಿಆರ್‌ಎಸ್ ಯೋಜನೆಯಡಿಯಲ್ಲಿ ಜಿಲ್ಲೆಯ 53 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಶನಿವಾರ ಶಾಖೆಯಲ್ಲಿ ಜರಗಿತು.

ಬೈಂದೂರು ವಿಧಾನಸಭೆ ಶಾಸಕರಾದ ಸುಕುಮಾರ್ ಶೆಟ್ಟಿ ಮಾತನಾಡಿ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಕೆ.ಎಮ್.ಎಫ್ ನ ನಿರ್ದೇಶಕರಾದ ದಿವಾಕರ್ ಶೆಟ್ಟಿ ಮಾತನಾಡಿ ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಕೊಲ್ಲೂರು ದೇವಸ್ಥಾನದ ಮಕ್ತೆಸರರು ಚಂದ್ರಶೇಖರ್ ಶೆಟ್ಟಿ ಮಾತನಾಡಿ ಜೀವನದಲ್ಲಿ ಒಳ್ಳೆಯ ಸಂಸ್ಕಾರವಂತರರಾಗಿ ಎಂದು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಜಮಿಯಿತುಲ್ ಫಲಾಹ್ (ರಿ.)ಅಧ್ಯಕ್ಷರಾದ ಶಬಿ ಅಹ್ಮದ್ ಕಾಜಿ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ.ವಿದ್ಯಾ ಸರಸ್ವತಿ ರವರು ಮಾತನಾಡಿ ಸಂಸ್ಥೆಯು ವ್ಯಾಪಾರದಲ್ಲಿ ಬರುವ ಲಾಭಂಶದ ಶೇ.5ರಷ್ಟು ಹಣವನ್ನು ಸಿಎಸ್‌ಆರ್ ನಿಧಿ ನೀಡುತ್ತಿದ್ದು, ಇದರಲ್ಲಿ ಬಡವರಿಗೆ ಉಚಿತ ಔಷಧಿ ವಿತರಣೆ, ಪರಿಸರ ಕಾಳಜಿ, ಉಚಿತ ಗೃಹ ನಿರ್ಮಾಣ, ವಿದ್ಯಾರ್ಥಿ ವೇತನ,ಬಡ ಹೆಣ್ಣು ಮಕ್ಕಳ ಮದುವೆಗೆ ಸಹಾಯ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ,

ಒಟ್ಟು ಭಾರತದಾದ್ಯಂತ 9.45 ಲಕ್ಷ ಫಲಾನುಭವಿಗಳಿಗೆ 165 ಕೋಟಿ ರೂಪಾಯಿ ವ್ಯಯಿಸಲಾಗಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಅಧಿಕ ಅಂಕ ಪಡೆದ ಹರ್ಷಿತ,ಗುರುರಾಜ್,ಪುನೀತ್ ನಾಯ್ಕ್ ಮಲ್ಪೆ,ಅದ್ವೈತ್ ಶಂಕರನಾರಾಯಣ ರವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಪುರಂದರ ತಿಂಗಳಾಯ,ತಂಝೀಮ್ ಶಿರ್ವ,ಸಂದ್ಯಾ ಶೆಣೈ ಹಾಗೂ ಗಣ್ಯರು,ಹಿತೈಷಿಗಳು,ವಿವಿಧ ಕಾಲೇಜಿನ ಪ್ರಾಂಶುಪಾಲರು,ಅಧ್ಯಾಪಕರು, ಮಕ್ಕಳ ಪೋಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ರಾಘವೇಂದ್ರ ನಾಯಕ್ ವಂದಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago