ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ.
ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ. ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ನ ಅಧಿಕೃತ ಅಧಿಕಾರಿ ಸಂದೀಪ್ ಎಂಬವರು ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ.
2023ರ ಮಾರ್ಚ್ 31 ರಂದು ಕಂಪನಿಯ ತಂತ್ರಜ್ಞರು ನಡೆಸಿದ ದಿನನಿತ್ಯದ ಪರಿಶೀಲನೆಯ ಸಂದರ್ಭದಲ್ಲಿ ಸರ್ವೆ ನಂಬರ್ 232/2b2-p2 ರಲ್ಲಿ ಅಳವಡಿಸಲಾಗಿದ್ದ ಮೊಬೈಲ್ ಟವರ್ ಕಾಣೆಯಾಗಿರುವುದು ಕಂಡುಬಂದಿದೆ. ಕಳ್ಳತನ ನಡೆದಿರುವುದು ಬೆಳಕಿಗೆ ಬಂದ ತಕ್ಷಣ ಕಂಪನಿಗೆ ಮಾಹಿತಿ ನೀಡಲಾಯಿತು ಮತ್ತು ಆಂತರಿಕ ತನಿಖೆಯ ಮೂಲಕ ಅಪರಿಚಿತ ವ್ಯಕ್ತಿಗಳು ಟವರ್ ಅನ್ನು ಕಳವು ಮಾಡಿದ್ದಾರೆ ಎಂದು ದೃಢಪಟ್ಟಿದೆ.
ಕಳವು ಮಾಡಿದ ಆಸ್ತಿಯ ಮೌಲ್ಯ 36,92,992 ರೂಪಾಯಿಗಳಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…