Featured

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಪುನರಾರಂಭ – ಉದ್ಘಾಟಿಸಿದ ಶಾಸಕ ರಘುಪತಿ ಭಟ್ – Vishwanews24

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆ ಉದ್ಘಾಟಿಸಿದ ಶಾಸಕ ರಘುಪತಿ ಭಟ್

ಉಡುಪಿ: ಮಲ್ಪೆ ಕಡಲ ತೀರದಲ್ಲಿ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಭಾನುವಾರ ಡಿ.25ರಂದು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇರಳ ಬಿಟ್ಟರೆ ಇಡೀ ದೇಶದಲ್ಲಿ ಮಲ್ಪೆ ಬೀಚ್‌ನಲ್ಲಿ ಮಾತ್ರ ನಿರ್ಮಾಣಗೊಂಡಿರುವ ಸೇತುವೆ ಇದಾಗಿದ್ದು ಪ್ರವಾಸಿಗರು ಇನ್ನಷ್ಟು ಖುಷಿ ಪಡಬಹುದು ಎಂದರು.

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಎಸ್‌ಪಿ ಅಕ್ಷಯ್‌ ಹಾಕೆ ಮುಖ್ಯ ಅತಿಥಿಗಳಾಗಿದ್ದು, ಕಳೆದ ಮೇ ತಿಂಗಳ ಮಧ್ಯೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಪ್ರವಾಸಿಗರ ಆಕರ್ಷಣೆಗೆ ತೇಲು ಸೇತುವೆಯನ್ನು ಆರಂಭಿಸಲಾಗಿತ್ತು. ಕೆಲವೊಂದು ತಾಂತ್ರಿಕ ಕಾರಣದಿಂದ ಕೆಲವೇ ದಿನಗಳಲ್ಲಿ ಅದು ಸ್ಥಗಿತಗೊಂಡಿತ್ತು.

ಇನ್ನು ಕೇರಳ ಮತ್ತು ರಾಜ್ಯದ ತಜ್ಞರ ತಂಡ ಪರಿಶೀಲನೆಗೆ ಆಗಮಿಸಿದ್ದು, ತೇಲುವ ಸೇತುವೆಯ ಸಾಮರ್ಥ್ಯ ಕಾರ್ಯಕ್ಷಮತೆಯನ್ನು ಪರೀಕ್ಷೆಗೆ ಒಳಪಡಿಸಿ ದೃಢೀಕರಿಸಿದೆ. ವೈಜ್ಞಾನಿಕ ವಾಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು ಈ ಸೇತುವೆಯ ಬ್ಲಾಕ್‌ಗಳು ಮಾಂಡೌಸ್‌ ಚಂಡಮಾರುತಕ್ಕೂ ಹಾನಿಯಾಗಿಲ್ಲ. ಹೆಚ್ಚು ದೃಢವಾದ ಜೋಡಣೆಯಿಂದ ಗಟ್ಟಿಯಾಗಿದೆ. ವರದಿ ಆಧಾರದಲ್ಲಿ ಜಿಲ್ಲಾಡಳಿತವು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಆರಂಭಗೊಂಡಿದೆ.

ಸಂಸ್ಥೆಯ ಪಾಲುದಾರರಾದ ಶೇಖರ್‌ ಪುತ್ರನ್‌, ಧನಂಜಯ ಕಾಂಚನ್‌, ಸುದೇಶ್‌ ಶೆಟ್ಟಿ ಮೊದ ಲಾದವರು ಪಾಲ್ಗೊಂಡಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago