Featured

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ – vishwanews24

ಉಡುಪಿ : ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್‌ಇಝೆಡ್‌ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್(ಹಡಗು) ಮಲ್ಪೆಯ ಶಿಪ್ ಬಿಲ್ಡಿಂಗ್ ಯಾರ್ಡ್‌ನಲ್ಲಿ ಲೋಕಾರ್ಪಣೆಗೊಂಡಿತು.

60ಕೋಟಿ ರೂ. ವೆಚ್ಚದ ಈ ಹಡಗು 33 ಮೀಟರ್ ಉದ್ದ, 12.2 ಮೀಟರ್ ಅಗಲ ಮತ್ತು 4.2 ಮೀಟರ್ ಆಳ ಹೊಂದಿದ್ದು, ಎರಡು 1838 ಕಿಲೋವಾಟ್ ಸಾಮರ್ಥ್ಯದ ಎಂಜಿನ್‌ಗಳನ್ನು ಮತ್ತು 2.7 ಮೀಟರ್ ಪ್ರೊಪೆಲರ್‌ಗಳು ಹಾಗೂ ಡೆಕ್ ಉಪಕರಣಗಳನ್ನು ಹೊಂದಿವೆ.

ಹಡಗನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಬೈಂದೂರಿನಿಂದ ಮಂಗಳೂರಿನ ಉಳ್ಳಾಲದವರೆಗೆ ಕಡಲ ಕಿನಾರೆಯಲ್ಲಿ ಪ್ರಯಾಣಿಕರ ಬೋಟನ್ನು ಪ್ರಾರಂಭಿಸುವ ಚಿಂತನೆ ಇದೆ. ಹೆದ್ದಾರಿಗೆ ಪರ್ಯಾಯವಾಗಿ ಸಮುದ್ರ ಕಿನಾರೆಯಲ್ಲಿ ವಾಟರ್ ಮೆಟ್ರೋ ಮಾದರಿಯಲ್ಲಿ ಈ ಪ್ರಯಾಣಿಕರ ಹಡಗು ಆರಂಭಿಸಬೇಕೆಂಬುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ಕೇಂದ್ರ ಸರಕಾರಕ್ಕೆ ಪ್ರಾಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಯಾಣಿಕರ ಹಡಗಿಗೆ ಮಂಜೂರಾತಿ ದೊರತರೆ ಅದನ್ನು ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಮೂಲಕವೇ ನಿರ್ಮಾಣ ಮಾಡಿಸಲಾಗುವುದು ಎಂದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ. ನಿಮ್ಮ ನಿಯಮಗಳನ್ನು ಗಮನದಲ್ಲಿ ಇಟ್ಟುಕೊಂಡು ಉಡುಪಿ ಜಿಲ್ಲೆಗೆ ಆದ್ಯತೆ ನೀಡಿ ಕರ್ನಾಟಕದವರಿಗೆ ಇದರಲ್ಲಿ ಅವಕಾಶವನ್ನು ಕಲ್ಪಿಸಿಕೊಡಬೇಕು. ಅದೇ ರೀತಿ ಸ್ಥಳೀಯ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಕೊಚ್ಚಿನ್ ಶಿಪ್‌ಯಾರ್ಡ್‌ನ ತಾಂತ್ರಿಕ ನಿರ್ದೇಶಕ ರಾಜೇಶ್ ಗೋಪಾಲ ಕೃಷ್ಣನ್, ಓಷಿಯನ್ ಸ್ಪಾರ್ಕಲ್‌ನ ಶಾಖಾ ಮುಖ್ಯಸ್ಥ ಮರಿಯಾ ಅನ್ಸೋನ್ ಹಾಗೂ ಪ್ರಶಾಂತ್ ನಾಯರ್ ಉಪಸ್ಥಿತರಿದ್ದರು.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಕುಮಾರ್ ಎ. ಸ್ವಾಗತಿಸಿದರು. ಮುಖ್ಯ ಆರ್ಥಿಕ ಅಧಿಕಾರಿ ಶಂಕರ್ ನಟರಾಜ್ ವಂದಿಸಿದರು. ಸವಿತಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

7 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

8 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

8 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago