ಉಡುಪಿ: ಅರಬ್ಬೀ ಸಮುದ್ರದಿಂದ ಭಾರೀ ಗಾತ್ರದ ಹೆಲಿಕಾಪ್ಟರ್ ಫಿಶ್‍ನನ್ನು ಬಲೆಹಾಕಿ ಹಿಡಿಯಲಾಗಿದೆ. ಮಲ್ಪೆ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಅಪರೂಪದ ಮೀನೊಂದು ಕಾಣಿಸಿಕೊಂಡು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಹೆಲಿಕಾಪ್ಟರ್ ಮೀನಿನ ಗಾತ್ರ ಆಕಾರ ನೋಡಿದರೆ ಆಶ್ಚರ್ಯಗೊಳ್ಳುತ್ತಾರೆ.
ಉಡುಪಿಯ ಮಲ್ಪೆ ಬಂದರಿನಲ್ಲಿ ಭಾರೀ ಗಾತ್ರ ಉದ್ದ ಬಾಲ, ಅಕ್ಕಪಕ್ಕ ಬೆನ್ನ ಮೇಲೆ ಅಗಲಗಲ ರೆಕ್ಕೆಯಿರುವ ಬಲು ಅಪರೂಪದ ಮೀನು ಸಿಕ್ಕಿದೆ. ಉಡುಪಿಯಿಂದ ಪಶ್ಚಿಮ ಕಡಲ ತೀರದಲ್ಲಿ ಸುಮಾರು 20 ನಾಟೇಕಲ್ ದೂರದಲ್ಲಿ ಲುಕ್ಮನ್ ಎಂಬವರಿಗೆ ಸೇರಿದ ಮೀನುಗಾರಿಕಾ ಬೋಟ್ ನಲ್ಲಿ ಬಲೆ ಬೀಸಲಾಗಿತ್ತು. ಬಂಗುಡೆ, ಅಂಜಲ್ ಮೀನಿನ ಜೊತೆಗೆ ಭಾರೀ ಗಾತ್ರದ ಈ ಮೀನು ಬಿದ್ದಿದೆ.
ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ – Vishwanews24
ಸ್ಥಳೀಯವಾಗಿ ಇದಕ್ಕೆ ನೆಮ್ಮೀನ್ ಎಂಬ ಹೆಸರಿದೆ. ಹೆಲಿಕಾಪ್ಟರ್ ಫಿಶ್ ಅಂತ ಅಡ್ಡ ಹೆಸರಿದೆ. ಭಾರೀ ಗಾತ್ರದ ಮೀನು 84 ಕಿಲೋ ತೂಗುತ್ತಿತ್ತು. ಕರ್ನಾಟಕದ ಮಂದಿಗೆ ಹೆಲಿಕಾಪ್ಟರ್ ಫಿಶ್ ನ ಮಾಂಸ ಇಷ್ಟ ಇಲ್ಲ. ಇಲ್ಲಿನವರಿಗೆ ಅದರ ರುಚಿ ಹಿಡಿಸುವುದಿಲ್ಲ. ಕೇರಳಿಗರು ಕೆಜಿಗೆ ಐವತ್ತು ರೂಪಾಯಿ ಕೊಟ್ಟು ನೆಮ್ಮೀನ್ ನ ಮಾಂಸವನ್ನು ಖರೀದಿ ಮಾಡುತ್ತಾರೆ. ಮಲ್ಪೆಯಿಂದ ಮಂಗಳೂರು ಮೂಲಕ ಕೇರಳಕ್ಕೆ ನೆಮ್ಮಿನನ್ನು ರವಾನೆ ಮಾಡಲಾಯಿತು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…