ಉಡುಪಿ: ಮಹಾಲಕ್ಷ್ಮಿ ಬ್ಯಾಂಕ್ ನ ಮಲ್ಪೆ ಬ್ರಾಂಚ್ ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ ನಡೆಸಿದರು. ಬ್ಯಾಂಕ್ ನಲ್ಲಿ ಮೂರು ರೀತಿಯ ಅಕ್ರಮ ನಡೆದಿದೆ. ಮೊದಲನೆಯದಾಗಿ ಹಲವು ಮಂದಿಗೆ ಬ್ಯಾಂಕ್ ನವರೇ ಅವರ ಮನೆಗೆ ತೆರಳಿ 20,30 ಸಾವಿರ ಸಾಲ ನೀಡಿದ್ದಾರೆ. ಈಗ ಬ್ಯಾಂಕ್ ನಿಂದ ಎರಡು ಲಕ್ಷ ಕಟ್ಟಬೇಕು ಎಂಬ ನೋಟೀಸ್ ನೀಡಲಾಗಿದೆ. ಇನ್ನೂ ಕೆಲವರಿಗೆ ಮೀನುಗಾರಿಕೆಗಾಗಿ ಸಾಲದ ಹೆಸರಿನಲ್ಲಿ ಸಹಿ ಪಡೆಯಲಾಗಿದ್ದು ಅವರಿಗೆ ಯಾವುದೇ ಹಣ ನೀಡಿಲ್ಲ. ಇದೇ ರೀತಿ ಹಲವಾರು ರೀತಿಯಲ್ಲಿ ಬ್ಯಾಂಕ್ ನವರು ಕೋಟ್ಯಂತರ ರೂ. ಅಕ್ರಮ ಎಸಗಿದ್ದಾರೆ.
ಸಂತ್ರಸ್ತರು ಈಗ ತಮ್ಮನ್ನು ಸಂಪರ್ಕಿಸಿದ್ದು ನ್ಯಾಯಕ್ಕಾಗಿ ಒತ್ತಾಯ ಮಾಡಿದ್ದಾರೆ. ಅವರ ದನಿಯಾಗಿ ನಾನು ಅವರ ಜೊತೆ ನಿಂತಿದ್ದೇನೆ. ಸರಕಾರ ಮಹಾಲಕ್ಷ್ಮಿ ಬ್ಯಾಂಕ್ ವಿರುದ್ಧ ಎಸ್‌ಐಟಿ ತನಿಖೆ ನಡೆಸುವ ಮೂಲಕ ನೊಂದವರಿಗೆ ನ್ಯಾಯ ಒದಗಿಸಿಕೊಡಬೇಕು ಮತ್ತು ಬ್ಯಾಂಕ್ ನವರು ಆಣೆ ಪುಮಾಣಕ್ಕೆ ಆಹ್ವಾನ ನೀಡಿದ್ದು ತಾವದಕ್ಕೆ ಸಿದ್ಧ ಎಂದು ರಘುಪತಿ ಭಟ್ ಅವರು ಹೇಳಿದ್ದಾರೆ . ರಘುಪತಿ ಭಟ್ ಜೊತೆಗೆ ಬ್ಯಾಂಕ್ ನಿಂದ ನೊಂದ ಸುಮಾರು ನೂರು ಮಂದಿ ಜನರು ಉಪಸ್ಥಿತರಿದ್ದು ತಮ್ಮ ಸಮಸ್ಯೆಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…