Featured

ಉಡುಪಿ : ಮಳೆಯಿಂದಾದ ಬೆಳೆ ಹಾನಿಗೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರ ನೀಡಿ : ದೀಪಕ್ ಕೋಟ್ಯಾನ್ – VIshwanews24

ಉಡುಪಿ: ಮಳೆಯಿಂದಾದ ಬೆಳೆ ಹಾನಿಗೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರ ನೀಡಿ : ದೀಪಕ್ ಕೋಟ್ಯಾನ್

ಉಡುಪಿ: ಕಳೆದ ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹದಿಂದ ಜಿಲ್ಲೆಯ ಕೃಷಿಕರ ಸಾವಿರಾರು ಎಕರೆ ಪ್ರದೇಶದ ಭತ್ತ ಅಡಿಕೆ ಸೇರಿದಂತ ಹಲವಾರು ಬೆಳೆಗಳು ನಾಶವಾಗಿದ್ದು ಇದಕ್ಕೆ ರಾಜ್ಯ ಸರಕಾರ ಗರಿಷ್ಠ ಮೊತ್ತದ ಪರಿಹಾರವನ್ನು ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಆಗ್ರಹಿಸಿದ್ದಾರೆ.

ಜಿಲ್ಲೆಯ ರೈತರು ಈಗಷ್ಠೆ ಗದ್ದೆಗಳಲ್ಲಿ ನಾಟಿ ಕೆಲಸ ಆರಂಭಿಸಿದ್ದು ಇದೇ ಸಮಯದಲ್ಲಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಭತ್ತದ ಕೃಷಿ ಸಂಪೂರ್ಣವಾಗಿ ಕೊಳೆತು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಮಳೆ ಮತ್ತು ಪ್ರವಾಹದಿಂದ ದೊಡ್ಡ ಮೊತ್ತದ ಹೊಡೆತ ಬಿದ್ದಿದ್ದು ಇಲಾಖೆಯ ಅಧಿಕಾರಿಗಳು ಸಮೀಕ್ಷೆಯನ್ನು ನಡೆಸಲು ಆರಂಭಿಸಿದ್ದು ಸಮೀಕ್ಷಾ ವರದಿಯನ್ನು ಸಿದ್ದಪಡಿಸುವಾಗ ಯಾವುದೇ ರೈತರ ಹೆಸರೂ ಕೂಡ ಬಿಟ್ಟುಹೋಗದಂತೆ ಮತ್ತು ಗೊಂದಲಕ್ಕೆ ಕಾರಣವಾಗಬಾರದು.

ಸರಕಾರ ಸದ್ಯ ಕೃಷಿ ಮತ್ತು ತೋಟಗಾರಿಕಾ ಬೆಳೆ ಹಾನಿಗೆ ನೀಡುವ ಪರಿಹಾರ ರೈತರು ಮಾಡಿದ ಖರ್ಚಿಗೆ ಹೋಲಿಸಿದರೆ ಏನೇನು ಸಾಲದು. ಸರಕಾರ ಈ ಕುರಿತು ಚಿಂತನೆ ನಡೆಸಿ ಹಾನಿಗೊಳಾಗಾದ ರೈತರಿಗೆ ಗರಿಷ್ಠ ಮೊತ್ತ ಲಭಿಸುವಂತೆ ಪ್ಯಾಕೇಜ್ ಘೋಷಣೆ ಮಾಡಿದರೆ ಇದರಿಂದ ಅವರಿಗೆ ಕೊಂಚ ನೆಮ್ಮದಿ ಸಿಗಲು ಸಾಧ್ಯವಿದೆ.
ಪ್ರವಾಹದಿಂದಾಗಿ ಹಲವಾರು ರೈತರ ಜಾನುವಾರುಗಳು ಕೂಡ ಸಮಸ್ಯೆಗೆ ಸಿಲುಕಿದ್ದು ಅಂತಹ ಹೈನುಗಾರರಿಗೆ ಕೂಡ ಸರಕಾರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago