Featured

ಉಡುಪಿ: ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ ಶೀಘ್ರ ಪರಿಹಾರ ಒದಗಿಸಿ: ಸಚಿವೆ ಶೋಭಾ ಕರಂದ್ಲಾಜೆ – Vishwanews24

ಉಡುಪಿ: ಮಳೆಯಿಂದ ಹಾನಿಗೊಳಗಾದ ಭತ್ತದ ಬೆಳೆಗೆ ಶೀಘ್ರ ಪರಿಹಾರ ಒದಗಿಸಿ: ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಭಿತ್ತನೆ ಮಾಡಿದ ಭತ್ತದ ಬೆಳೆಯು ಹಾನಿಯಾಗಿದ್ದು, ರೈತರಿಗೆ ಹಾನಿಯ ಮೊತ್ತವನ್ನು ಶೀಘ್ರದಲ್ಲಿಯೇ ಒದಗಿಸಬೇಕು. ಅವರು ಮತ್ತೊಮ್ಮೆ ಭಿತ್ತನೆ ಮಾಡಲು ಅಗತ್ಯಕ್ಕನುಗುಣವಾಗಿ ಭಿತ್ತನೆ ಬೀಜವನ್ನು ಸಮರ್ಪಕವಾಗಿ ವಿತರಣೆ ಮಾಡಲು ಮುಂದಾಗಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ, ಜಿಲ್ಲೆಯ ಪ್ರಾಕೃತಿಕ ವಿಕೋಪ ಸಂಬAಧಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಜೂನ್ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ.31 ರಷ್ಟು ಕಡಿಮೆ ಮಳೆಯಾಗಿ ಜುಲೈ 1 ರಿಂದ ಈವರೆಗೆ ವಾಡಿಕೆ ಮಳೆಗಿಂತ ಶೇ.136 ರಷ್ಟು ಹೆಚ್ಚುವರಿ ಮಳೆಯಾಗಿದೆ. ಕಳೆದ ಮಾಹೆಯಲ್ಲಿ ಕುಂಠಿತ ಮಳೆಯಿಂದಾಗಿ ಭಿತ್ತನೆ ಕಾರ್ಯಗಳು ನಿಗಧಿತ ಪ್ರಮಾಣದಲ್ಲಿ ಆಗದೇ ಜೂನ್ ಕೊನೆಯ ವಾರದಲ್ಲಿ ಹಾಗೂ ಜುಲೈ ಮೊದಲ ವಾರದಲ್ಲಿ ಭಿತ್ತನೆ ಕಾರ್ಯಗಳು ಚುರುಕುಗೊಂಡಿದ್ದು, ಇದುವರೆಗೆ 13526 ಹೆಕ್ಟೇರ್ ಭಿತ್ತನೆ ಆಗಿದ್ದು, ಕಳೆದ 4-5 ದಿನಗಳಿಂದ ಸುರಿದ ಹೆಚ್ಚಿನ ಮಳೆಯಿಂದಾಗಿ ಅಂದಾಜು 1300 ಹೆಕ್ಟೇರ್‌ಗೂ ಅಧಿಕ ಬೆಳೆಹಾನಿ ಉಂಟಾಗಿದೆ ಎಂದರು.

ಮಳೆಯ ಪ್ರಮಾಣ ತಗ್ಗಿದ ನಂತರ ಬೆಳೆಹಾನಿಯನ್ನು ನಿಖರವಾಗಿ ಗುರುತಿಸಿ ರಾಷ್ಟಿçÃಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಒದಗಿಸುವುದರ ಜೊತೆಗೆ ಸ್ಥಳೀಯವಾಗಿ ಬೇಡಿಕೆಯಿರುವ ಎಂ.ಓ.4 ಭಿತ್ತನೆ ಬೀಜವನ್ನು ರೈತರಿಗೆ ಸಹಾಯಧನದ ಅಡಿಯಲ್ಲಿ ವಿತರಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ಕಡಲಕೊರೆತ ಉಂಟಾಗಿ ಸಮುದ್ರ ತೀರದಲ್ಲಿರುವ ಮೀನುಗಾರರಲ್ಲಿ ಆತಂಕ ಉಂಟಾಗಿದೆ. ಕಡಲ ಕೊರೆತ ಉಂಟಾಗದAತೆ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಪ್ರಸ್ತುತ ಎನ್.ಡಿ.ಆರ್.ಎಫ್ ನಿಯಮಾವಳಿಯಲ್ಲಿ ಕಡಲ ಕೊರೆತ ಕಾಮಗಾರಿಗಳಿಗೆ ಅವಕಾಶವಿರುವುದಿಲ್ಲ. ಇದನ್ನು ಈ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ, ಮಾಹಿತಿ ನೀಡಿದಲ್ಲಿ ಈ ಬಗ್ಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದರು.

ಅತಿಯಾದ ಮಳೆಯಿಂದಾಗಿ ರಸ್ತೆಗಳು, ಶಾಲೆಗಳು, ಅಂಗನವಾಡಿ, ಸರ್ಕಾರಿ ಕಟ್ಟಡಗಳು, ಸೇತುವೆಗಳು ಸೇರಿದಂತೆ ಮತ್ತಿತರ ಶಾಶ್ವತ ಕಾಮಗಾರಿಗಳಿಗೆ ಹಾನಿ ಉಂಟಾಗಿದ್ದು, ಇದರ ಹಾನಿಯ ಮೊತ್ತವನ್ನು ನಿಖರವಾಗಿ ಗುರುತಿಸಿ ಸರ್ಕಾರಕ್ಕೆ ವರದಿ ನೀಡಬೇಕಂದು ಸೂಚನೆ ನೀಡಿದ ಅವರು, ಗ್ರಾಮೀಣ ಭಾಗದ ರಸ್ತೆಗಳನ್ನು ಜಿಲ್ಲಾ ಪಂಚಾಯತ್ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಿದಲ್ಲಿ ಶೀಘ್ರದಲ್ಲಿ ದುರಸ್ತಿಗೆ ಅನುಕೂಲವಾಗಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಮೊಬೈಲ್ ಸಿಗ್ನಲ್‌ಗಳು ಸಿಗುತ್ತಿಲ್ಲ ಎಂಬ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಟವರ್‌ಗಳಿಗೆ ವಿದ್ಯುಚ್ಛಕ್ತಿ ಸರಬರಾಜಿನ ಕೊರತೆಯಿಂದಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮೆಸ್ಕಾಂ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಮುಂದಾಗಬೇಕು ಎಂದು ಸೂಚನೆ ನೀಡಿದರು.

ರಾಷ್ಟಿçÃಯ ಹೆದ್ದಾರಿಯ ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು. ಜಿಲ್ಲಾಡಳಿತದಿಂದ ಗುರುತಿಸಲಾಗಿರುವ ಅಪಘಾತ ಸ್ಥಳಗಳಲ್ಲಿ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿಗಳನ್ನು ಕೈಗೊಂಡು ವಾಹನಗಳು ಸುರಕ್ಷಿತವಾಗಿ ಚಾಲನೆ ಆಗುವಂತೆ ನೋಡಿಕೊಳ್ಳಬೇಕು. ಕಾಲ ಕಾಲಕ್ಕೆ ರಸ್ತೆ ನಿರ್ವಹಣೆ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago