ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಅರ್ಭಟದಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಐಟಿಐ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ಆ.18ರಂದು ರಜೆ ಘೋಷಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಉಡುಪಿ ಜಿಲ್ಲೆಗಳಲ್ಲಿ ಅಗಸ್ಟ್ 24 ರವರೆಗೆ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ, ನಿವಾಸಿಗಳು ಮತ್ತು ಪ್ರವಾಸಿಗರು ಇಬ್ಬರೂ ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…