ಉಡುಪಿ : ಮಳೆಯ ಸಂದರ್ಭ ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ “ಸಿಡಿಲು” ಆಪ್ – Vishwanews24

Featured, ಉಡುಪಿ

ಉಡುಪಿ : ಮಳೆಯ ಸಂದರ್ಭ ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ “ಸಿಡಿಲು” ಆಪ್

ಉಡುಪಿ:ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ.

ಸಿಡಿಲು-ಮೊಬೈಲ್‌ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು.

ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿ0ದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟಾçನಿಕ್ ಉಪಕರಣಗಳನ್ನು ಬಳಸಬಾರದು.ಗೃಹಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು.ಗೋಡೆಯಿಂದ ದೂರವಿರುವುದು ಉತ್ತಮ.ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ – Vishwanews24

ಹೊರಾಂಗಣದಲ್ಲಿದ್ದಾಗಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು.ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು.ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು.

ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕ0ಬಗಳಿ0ದ ವಾಹನವನ್ನುದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು.

ಕಾಡಿನಲ್ಲಿದ್ದ ಸಂದರ್ಭದಲ್ಲಿಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು.ಗುಂಪಿನಲ್ಲಿದ್ದಾಗ ಜನರಿ0ದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಉಡುಪಿ: ಕಾಂಗ್ರೆಸ್ ಬಡ ಮಧ್ಯಮ ವರ್ಗದ ಪಕ್ಷ  : ವಿನಯ್ ಕುಮಾರ್ ಸೊರಕೆ – Vishwanews24

Leave a Reply