ಉಡುಪಿ:ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ.
ಸಿಡಿಲು-ಮೊಬೈಲ್ ಆಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು.
ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿ0ದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟಾçನಿಕ್ ಉಪಕರಣಗಳನ್ನು ಬಳಸಬಾರದು.ಗೃಹಪಯೋಗಿ ಉಪಕರಣಗಳ ಫ್ಲಗ್‌ಗಳನ್ನು ತೆಗೆದಿಡಬೇಕು.ಗೋಡೆಯಿಂದ ದೂರವಿರುವುದು ಉತ್ತಮ.ಒಣಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು.
ಹೊರಾಂಗಣದಲ್ಲಿದ್ದಾಗಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು.ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು.ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು.
ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕ0ಬಗಳಿ0ದ ವಾಹನವನ್ನುದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು.
ಕಾಡಿನಲ್ಲಿದ್ದ ಸಂದರ್ಭದಲ್ಲಿಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯುಬೇಕು.ಗುಂಪಿನಲ್ಲಿದ್ದಾಗ ಜನರಿ0ದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…