Featured

ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ – vishwanews24

ಉಡುಪಿ : ಮಳೆ ಆವಾಂತರಕ್ಕೆ ಮಣಿಪಾಲ ರಾ.ಹೆದ್ದಾರಿಯಲ್ಲಿ ಕೆಸರು ಮಣ್ಣಿನೊಂದಿಗೆ ಕಲ್ಲುಗಳ ರಾಶಿ

ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಇಂದು ಬೆಳಗಿನ ಜಾವಾದಿಂದ ಭಾರೀ ಗಾಳಿಮಳೆಯಾಗಿದೆ. ಮಳೆ ಆವಾಂತರದಿಂದ ಉಡುಪಿ ಹಾಗೂ ಮಣಿಪಾಲ ತತ್ತರಿಸಿ ಹೋಗಿದ್ದು, ವಾಹನ ಸಂಚಾರ ಹಾಗೂ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಉಡುಪಿ -ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್‌ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದೆ. ಇದರಿಂದ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ.

ಇಲ್ಲಿನ ಮಣ್ಣು, ಕಲ್ಲು ಮಳೆಯ ನೀರಿನೊಂದಿಗೆ ಲಕ್ಷ್ಮೀಂದ್ರನಗರದ ಕಡೆ ಹರಿದಿದ್ದು, ಇದರಿಂದ ಇಡೀ ರಸ್ತೆ ಕೆಸರು ಮಯವಾಗಿದೆ. ಕೆಸರು ಮಣ್ಣಿನೊಂದಿಗೆ ಕಲ್ಲುಗಳು ಕೂಡ ರಸ್ತೆಯಲ್ಲಿ ಬಂದು ಬಿದ್ದಿವೆ. ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಕೆಲವೊತ್ತು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು.

ಲಕ್ಷ್ಮೀಂದ್ರ ನಗರದಲ್ಲಿ ಕೆಸರು ನೀರು ತೋಡಿನಿಂದ ಉಕ್ಕಿ ಹರಿದು ಬಂದು ಅಂಗಡಿಗಳಿಗೆ ನುಗ್ಗಿವೆ. ಅಲ್ಲದೆ ಐನಾಕ್ಸ್ ಸಮೀಪದ ಸೆಂಟ್ರಲ್ ಪಾರ್ಕ್ ಸಂಕೀರ್ಣದ ಕೆಳ ಅಂತಸ್ತಿನಲ್ಲಿರುವ ಅಂಗಡಿಗಳಿಗೆ ಕೆಸರು ನೀರು ಹಾಗೂ ಮಣ್ಣುಗಳು ನುಗ್ಗಿವೆ. ಇದರಿಂದ ಅಪಾರ ಹಾನಿ ಸಂಭವಿಸಿದೆ. ತಕ್ಷಣ ನಗರಸಭೆ ಸಿಬ್ಬಂದಿಗಳು ಆಗಮಿಸಿ ಜೆಸಿಬಿ ಮೂಲಕ ತೋಡು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.

ಉಡುಪಿ ನಗರದ ಕೆಲವು ರಸ್ತೆಗಳಲ್ಲಿಯೂ ನೀರು ಆವರಿಸಿದ್ದು, ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಡಿಯಾಳಿ, ಕುಂಜಿಬೆಟ್ಟು ರಾಷ್ಟ್ರೀಯ ಹೆದ್ದಾರಿ ಯಲ್ಲಿಯೇ ನೀರು ಹರಿಯುತ್ತಿರುವುದು ಕಂಡುಬಂತು. ಮಳೆಯಿಂದ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಹೊರ ಜಿಲ್ಲೆ ಹಾಗೂ ರಾಜ್ಯಗಳ ಭಕ್ತರು ತೀರಾ ತೊಂದರೆ ಅನುಭವಿಸಿದರು. ರಾಷ್ಟ್ರೀಯ ಹೆದ್ದಾರಿ 66ರಲ್ಲೂ ಮಳೆ ನೀರು ರಸ್ತೆಯಲ್ಲಿ ನಿಂತು ಸಮಸ್ಯೆ ಸೃಷ್ಠಿಯಾಗಿತ್ತು.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago