ಉಡುಪಿ: ಮಳೆ ಹಾನಿ ಗ್ರಾಮಾಂತರ ಪ್ರದೇಶಗಳಿಗೆ ಶಾಸಕ ಕೆ. ರಘುಪತಿ ಭಟ್ಟರಿಂದ ಪರಿಹಾರಧನ ಹಸ್ತಾಂತರ -Vishwanews24
ಉಡುಪಿ: ಪ್ರಕೃತಿ ವಿಕೋಪದಿಂದ ಮನೆ ಮತ್ತು ಆಸ್ತಿಪಾಸ್ತಿ ಕಳೆದುಕೊಂಡ ಕಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಜೂರು ಗ್ರಾಮದ ಜನರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿ, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರಧನದ ಚೆಕ್ ನ್ನು ಮನೆಯವರಿಗೆ ಹಸ್ತಾಂತರಿಸಿದರು.
ಈ ವೇಳೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೋರಯ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಳ್ಳಿ,ಸ್ಥಳೀಯ ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಕ್ಷದ ಪ್ರಮುಖರು ಇದ್ದರು.
ಕೆಂಜೂರು ನಿವಾಸಿಗಳಾದ ಪ್ರಕೃತಿ ವಿಕೋಪದ ಸಂತ್ರಸ್ತರಾದ ಕಮಲ ಕುಲಾಲ, ನರಸಿಂಹ ಕುಲಾಲ್,ಅಮ್ಮಣ್ಣಿ ಕುಲಾಲರಿಗೆ ತಲಾ 95,100ರೂ.ಗಳ ಪ್ರಥಮ ಹಂತದ ಪರಿಹಾರ ಮೊತ್ತವನ್ನು ವಿತರಿಸಲಾಯಿತು.
