ಉಡುಪಿ : ಮಳೆ ಹಾನಿ ; 500 ಕೋಟಿ ರೂ. ತುರ್ತು ಪರಿಹಾರ ಘೋಷಿಸಿದ ಸಿಎಂ – VIshwanews24
ಉಡುಪಿ : ಮಳೆ ಹಾನಿ: 500 ಕೋಟಿ ರೂ. ತುರ್ತು ಪರಿಹಾರ ಘೋಷಿಸಿದ ಸಿಎಂ
ಉಡುಪಿ: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ, 500 ಕೋಟಿ ರೂ. ತುರ್ತು ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಉಡುಪಿ ಜಿಪಂ ಕಚೇರಿಯಲ್ಲಿ ಬುಧವಾರ ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅವಲೋಕನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನಜೀವನ ಸುಗಮಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತುರ್ತು ಪರಿಸ್ಥಿತಿ ನಿಭಾಯಿಸಲು ಜಿಲ್ಲಾಧಿಕಾರಿ ಖಾತೆಗೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಮಳೆಯಿಂದ ಹಾನಿಗೆ ಒಳಗಾಗಿರುವ ರಸ್ತೆ, ವಿದ್ಯುತ್, ಸೇತುವೆಗಳ ತುರ್ತು ಕಾಮಗಾರಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು.
ಸಂಸತ್ ಮುಂದಿನ ರಾಷ್ಟ್ರ ಲಾಂಛನ : ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ : ಉಡುಪಿಯಲ್ಲಿ ಸಿಎಂ
