Featured

ಉಡುಪಿ : ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಬರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ -Vishwanews24

ಉಡುಪಿ : ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಬರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ -Vishwanews24

ಉಡುಪಿ : ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಬರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಬರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸೆ.೧೭ರಿಂದ ಅ.೭ರ ವರೆಗೆ ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಸೆ.೨೯ರಿಂದ ಅ.೨ರ ವರೆಗೆ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋಧ್ಯೋಗ ಸಂಘ ಉಡುಪಿ ಇದರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತÀ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಿರುವ ಖಾದಿ ಮೇಳವನ್ನು ಉದ್ಘಾಟಿಸಿ, ಖಾದಿ ಉತ್ಪನ್ನಗಳನ್ನು ಖರೀದಿಸಿ ಮಾತನಾಡಿದರು.

ಖಾದಿ ಬಳಕೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಖಾದಿಯತ್ತ ಚಿತ್ತ ಹರಿಸುವ ಮೂಲಕ ನಮ್ಮ ದೈನಂದಿನ ಉಡುಗೆ ತೊಡುಗೆ ಆಚಾರ ವಿಚಾರಗಳು ಸ್ವದೇಶಿ ಚಿಂತನೆಗೆ ಪೂರಕವಾಗಿರಬೇಕು. ಈ ನಿಟ್ಟಿನಲ್ಲಿ ಸರಕಾರದ ಅಧಿಕಾರಿಗಳು ಹಾಗೂ ಪಕದ ಕಾರ್ಯಕರ್ತರು ವಾರದಲ್ಲಿ ಕನಿಷ್ಟ ೨ ದಿನ ಖಾದಿಯ ಉಡುಗೆ ತೊಡುವ ನೆಲೆಯಲ್ಲಿ ಪಕ್ಷದ ರಾಷ್ಟಿçÃಯ ಅಧ್ಯಕ್ಷರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಸಲ್ಲಿಸಿರುತ್ತೇನೆೆ. ಈ ಚಿಂತನೆ ಸಾಕಾರಗೊಂಡಲ್ಲಿ ಸ್ವದೇಶಿ ಚಿಂತನೆಯ ಖಾದಿಗೆ ಇನ್ನಷ್ಟು ಉತ್ತೇಜನ ದೊರಕಿದಂತಾಗುತ್ತದೆ ಎಂದು ಕುಯಿಲಾಡಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಸೇವೆ ಮತ್ತು ಸಮರ್ಪಣೆ ಅಭಿಯಾನದ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಸಹ ಸಂಚಾಲಕ ಹಾಗೂ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಅಭಿಯಾನದ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದ ಜಿಲ್ಲಾ ಸಂಚಾಲಕರು ಹಾಗೂ ಜಿಲ್ಲಾ ಉಪಾಧ್ಯಕರುಗಳಾದ ಸುಪ್ರಸಾದ್ ಶೆÉಟ್ಟಿ ಬೈಕಾಡಿ, ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂ. ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

8 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

8 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

8 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

8 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

1 day ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

1 day ago