Featured

ಉಡುಪಿ : ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪ : ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಸಮಗ್ರ ತನಿಖೆಗೆ ಮುಂದಾಗಲಿ : ರಮೇಶ್ ಕಾಂಚನ್  – vishwanews24

ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪ :  ನಿಷ್ಪಕ್ಷಪಾತವಾದ ತನಿಖೆ ನಡೆದು ಸತ್ಯ ಹೊರಬರಬೇಕಾಗಿದೆ : ರಮೇಶ್ ಕಾಂಚನ್

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರದ ಆರೋಪದ ಕುರಿತು ‘ಕಲಂ 64’ರ ಅಡಿಯಲ್ಲಿ ವಿಚಾರಣೆಗೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರು ಆದೇಶ ನೀಡಿರು ವುದು ಸ್ವಾಗತಾರ್ಹ ಸಂಗತಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ.

ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ‘ಕಲಂ 64ರಡಿಯಲ್ಲಿ ವಿಚಾರಣೆ ನಡೆಸುವಂತೆ ಸಂತ್ರಸ್ತರ ಪರವಾಗಿ ನ್ಯಾಯಕ್ಕಾಗಿ ಶ್ರಮಿಸುತ್ತಿರುವ ಹೋರಾಟ ಸಮಿತಿಯವರು ಬೆಂಗಳೂರಿನಲ್ಲಿ ಸಹಕಾರಿ ಸಚಿವರನ್ನು ಹಾಗೂ ಸಹಕಾರಿ ಸಂಘಗಳ ನಿಬಂಧಕರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಗ್ರ ತನಿಖೆಗೆ ಒತ್ತಾಯಿಸಿದ ನಿಟ್ಟಿನಲ್ಲಿ ಇದೀಗ ಸರಕಾರ, ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ 1959ರ ಪ್ರಕಾರ ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ಉಪನಿಬಂಧಕರನ್ನು ವಿಚಾರಣೆಗಾಗಿ ನೇಮಿಸಿ ಆದೇಶ ಹೊರಡಿಸಲಾಗಿದ್ದು ನಿಷ್ಪಕ್ಷಪಾತವಾದ ತನಿಖೆ ನಡೆದು ಈ ಮೂಲಕ ಸತ್ಯ ಹೊರಬರಬೇಕಾಗಿದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇನಾಮಿ ಹೆಸರಿನಲ್ಲಿ ನೀಡಿರುವ ಸಾಲವನ್ನು ಸ್ವಂತಕ್ಕೆ ಬಳಸಲಾಗಿದೆ ಎನ್ನುವ ಆರೋಪಕ್ಕೆ ಬ್ಯಾಂಕಿನ ಆಡಳಿತ ಮಂಡಳಿ ಯಾವುದೇ ರೀತಿಯ ಸ್ಪಷ್ಟ ಉತ್ತರ ನೀಡದೆ ಕೇವಲ ಹಾರಿಕೆ ಉತ್ತರ ನೀಡಿಕೊಂಡು ಬಂದಿದ್ದು ಇದೀಗ ‘ಕಲಂ 64ರ ಅಡಿಯಲ್ಲಿ ವಿಚಾರಣೆಗೆ ಅವಕಾಶ ನೀಡಿದ್ದು ಗ್ರಾಹಕರು ಮತ್ತು ಸಂತ್ರಸ್ತರು ನೀಡಿರುವ ದೂರಿನ ಮೇಲೆ ವಿವರವಾದ ತನಿಖೆ ನಡೆಯಬೇಕಾಗಿದೆ. ಗ್ರಾಹಕರ ಸಹಿಗಳನ್ನು ನಕಲಿ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ವಿಧಿ ವಿಜ್ಞಾನ ತಂಡದಿಂದ ತನಿಖೆ ನಡೆಸಬೇಕು ಇಲ್ಲವಾದರೆ ಇದಕ್ಕೆ ಸೂಕ್ತ ನ್ಯಾಯ ಸಿಗಲು ಸಾಧ್ಯವಿಲ್ಲ.

ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ಉಪನಿಬಂಧಕರು ವಿಚಾರಣೆ ನಡೆಸುವಾಗ ಬ್ಯಾಂಕಿನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಿತ ಸಿಬ್ಬಂದಿಗಳನ್ನು ಸಹ ವಿಚಾರಣೆಗೊಳಪಡಿಸಬೇಕು. ವಿಚಾರಣೆಯ ಸಂದರ್ಭದಲ್ಲಿ ಬ್ಯಾಂಕಿನಿಂದ ಆಗಿರುವ ಬೇರೆ ಬೇರೆ ರೀತಿಯ ಲೋಪದೋಷಗಳ ಕುರಿತು ಕೂಲಂಕುಷವಾದ ತನಿಖೆ ನಡೆಸಬೇಕು. ವಿಚಾರಣೆಯ ವರದಿಯನ್ನು ನಿಗದಿತ ಅವಧಿಯ ಒಳಗಾಗಿ ಸಮಾಜದ ಮುಂದೆ ಬಹಿರಂಗಪಡಿಸಬೇಕು. ಹೀಗಾಗಿ ಈ ತನಿಖೆಯ ವಿಚಾರಣಾಧಿ ಕಾರಿಯವರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಿ ತೊಂದರೆಗೊಳಗಾದ ನೂರಾರು ಸಂತ್ರಸ್ತರ ಸಮಸ್ಯೆಗೆ ಪರಿಹಾರ ಒದಗಿಸಬೇಕು.ಹಾಗೆಯೇ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ಸಮಗ್ರ ತನಿಖೆಗೆ ಮುಂದಾಗಬೇಕೆಂದು ಸಂತ್ರಸ್ತರ, ಬ್ಯಾಂಕಿನ ಗ್ರಾಹಕರ ಪರವಾಗಿ ಅಗ್ರಹಿಸುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

7 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

46 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

52 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

1 hour ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago