ಉಡುಪಿ: ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇದರ ವತಿಯಿಂದ ಎಸ್ ಎಸ್ ಎಲ್ ಸಿ ,ಪಿಯುಸಿ,ಹಾಗೂ ಸ್ನಾತಕೋತ್ತರ 1200 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡಿನ ಹೆಮ್ಮೆಯ “ಕಾಪು ಪಿಲಿಕೋಲ” ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ, ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಸ ಸಹಯೋಗದೊಂದಿಗೆ ಆಯೋಜಿಸಿದ್ದ ದ.ಕ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಶಿಕ್ಷಣ ನಿಧಿಗೆ ಬ್ಯಾಂಕಿನ ವತಿಯಿಂದ ಎಂಟು ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಜಿ ಶಂಕರ್ “ಬ್ಯಾಂಕಿನ ಲಾಭದ ಪಾಲನ್ನು ಸಮಾಜಕ್ಕೆ ನೀಡುವ ಮೂಲಕ ಹಿಂದುಳಿದವರು ಮುಂದಕ್ಕೆ ಬರಲು ಸಹಕಾರಿಯಾಗುತ್ತೆ-ದೈವನರ್ತಕರಿಗೆ ಹೆಚ್ಚಿನ ಆರ್ಥಿಕ ಭದ್ರತೆಯನ್ನು ಸರ್ಕಾರ ನೀಡಬೇಕು” ಎಂದರು.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಮಚ್ವೀಂದ್ರ ಮಾತನಾಡಿ “ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಜೀವನ ಕೌಶಲ್ಯ ಬೆಳೆಸಿಕೊಂಡಲ್ಲಿ ಮಾತ್ರ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯವಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನವನ್ನು ಎಚ್ಚರಿಕೆಯಿಂದ ಬಳಸಿ ಸ್ವಸಾಮರ್ಥ್ಯ ಗುರುತಿಸಿಕೊಂಡು ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯ ಬೇಕು. ಇಂದು ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪಡೆದ ಪ್ರತಿಭಾ ಪುರಸ್ಕಾರ ಮುಂದಿನ ಸಾಧನೆಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.
ಇಂದ್ರಾಳಿ ಜಯಕರ ಶೆಟ್ಟಿ,ಜಯ ಸಿ ಕೋಟ್ಯಾನ್,ಭಾಸ್ಕರ ಎಸ್ ಶೆಟ್ಟಿ,ಅಕ್ಷಯ ಪಿ ಶೆಟ್ಟಿ ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…