Featured

ಉಡುಪಿ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ- 25 ಲಕ್ಷ ರೂ. ಪ್ರತಿಭಾ ಪುರಸ್ಕಾರ -ಸನ್ಮಾನ -ಬಹುಮಾನ ವಿತರಣೆ: vishwanews24

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ- 25 ಲಕ್ಷ ರೂ. ಪ್ರತಿಭಾ ಪುರಸ್ಕಾರ -ಸನ್ಮಾನ -ಬಹುಮಾನ ವಿತರಣೆ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  “ಕಾಪು ಪಿಲಿಕೋಲ” ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ

ಉಡುಪಿ: ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇದರ ವತಿಯಿಂದ ಎಸ್ ಎಸ್ ಎಲ್ ಸಿ ,ಪಿಯುಸಿ,ಹಾಗೂ ಸ್ನಾತಕೋತ್ತರ 1200 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡಿನ ಹೆಮ್ಮೆಯ “ಕಾಪು ಪಿಲಿಕೋಲ” ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ, ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಸ ಸಹಯೋಗದೊಂದಿಗೆ ಆಯೋಜಿಸಿದ್ದ ದ.ಕ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಶಿಕ್ಷಣ ನಿಧಿಗೆ ಬ್ಯಾಂಕಿನ‌ ವತಿಯಿಂದ ಎಂಟು ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಜಿ ಶಂಕರ್ “ಬ್ಯಾಂಕಿನ‌ ಲಾಭದ ಪಾಲನ್ನು ಸಮಾಜಕ್ಕೆ ನೀಡುವ ಮೂಲಕ ಹಿಂದುಳಿದವರು‌ ಮುಂದಕ್ಕೆ ಬರಲು ಸಹಕಾರಿಯಾಗುತ್ತೆ-ದೈವನರ್ತಕರಿಗೆ ಹೆಚ್ಚಿನ ಆರ್ಥಿಕ ಭದ್ರತೆಯನ್ನು ಸರ್ಕಾರ ನೀಡಬೇಕು” ಎಂದರು.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಮಚ್ವೀಂದ್ರ ಮಾತನಾಡಿ “ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಜೀವನ ಕೌಶಲ್ಯ ಬೆಳೆಸಿಕೊಂಡಲ್ಲಿ ಮಾತ್ರ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯವಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನವನ್ನು ಎಚ್ಚರಿಕೆಯಿಂದ ಬಳಸಿ ಸ್ವಸಾಮರ್ಥ್ಯ ಗುರುತಿಸಿಕೊಂಡು ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯ ಬೇಕು. ಇಂದು ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪಡೆದ ಪ್ರತಿಭಾ ಪುರಸ್ಕಾರ ಮುಂದಿನ ಸಾಧನೆಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಇಂದ್ರಾಳಿ ಜಯಕರ ಶೆಟ್ಟಿ,ಜಯ ಸಿ‌ ಕೋಟ್ಯಾನ್,ಭಾಸ್ಕರ ಎಸ್ ಶೆಟ್ಟಿ,ಅಕ್ಷಯ ಪಿ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago