Featured

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 7ನೇ ಬಾರಿಗೆ ಸಾಧನಾ ಪ್ರಶಸ್ತಿ – Vishwanews24

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 7ನೇ ಬಾರಿಗೆ ಸಾಧನಾ ಪ್ರಶಸ್ತಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ ೨೦೨೨-೨೩ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿoದ ನೀಡಲ್ಪಡುವ  ಸಾಧನಾ ಪ್ರಶಸ್ತಿ ಸತತ ೭ ನೇ ಬಾರಿಗೆ ಲಭಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ  ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಹಾಗೂ ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಜಗದೀಶ್ ಮೊಗವೀರ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಕಿರಣ್ ಉಪಸ್ಥಿತರಿದ್ದರು.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್  ಶ್ರೀ ಯಶ್‌ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳ ಮೂಲಕ ಗ್ರಾಹಕರಿಗೆ ಆಧುನಿಕ ಬ್ಯಾಂಕಿoಗ್ ಸೌಲಭ್ಯಗಳ ಸೇವೆಯೊಂದಿಗೆ ವ್ಯವಹಾರ ನಡೆಸುತ್ತಿದ್ದು, ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ ೧೮% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಆಧುನಿಕ ಬ್ಯಾಂಕಿoಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.
Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

16 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

17 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

17 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

17 hours ago