Featured

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಅವ್ಯವಹಾರ  ವಿಚಾರಣೆಗೆ ಆದೇಶ ನೀಡಿರುವುದು ಸಂತ್ರಸ್ತರಿಗೆ ಸಿಕ್ಕಿರುವ ಮೊದಲ ಗೆಲುವು- vishwanews24

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಅವ್ಯವಹಾರ  ವಿಚಾರಣೆಗೆ ಆದೇಶ ನೀಡಿರುವುದು ‘ಸಂತ್ರಸ್ತ ಹೋರಾಟಗಾರರಿಗೆ ಸಿಕ್ಕ ಮೊದಲ ಗೆಲುವು

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಕೋಟ್ಯಾಂತರ ರೂ.ಗಳ ಅವ್ಯವಹಾರ ಕುರಿತು ‘ಕಲಂ 64’ರ ಅಡಿಯಲ್ಲಿ ವಿಚಾರಣೆಗೆ ಕರ್ನಾಟಕ ರಾಜ್ಯ ಸಹಕಾರಿ ಸಂಘಗಳ ನಿಬಂಧಕರು ಆದೇಶ ನೀಡಿರುವುದು ಸಂತ್ರಸ್ತರು ಕಳೆದ ಎರಡು ತಿಂಗಳಿನಿಂದ ನಡೆಸುತ್ತಿರುವ ಸತತ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವಾಗಿದೆ ಎಂದು ಸಂತ್ರಸ್ತರು ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿದ, ಪ್ರಕರಣದ ಕುರಿತು ದೂರು ನೀಡಿರುವ ಪ್ರಸಾದ್ ಕುಲಾಲ್ ಹಾಗೂ ನವೀನ್ ಸಾಲ್ಯಾನ್ ಕುಕ್ಕೆಹಳ್ಳಿ, ವಿಚಾರಣೆಗೆ ಒಳಪಡಿಸುವಾಗ ಬ್ಯಾಂಕಿನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಿತ ಸಿಬ್ಬಂದಿಗಳನ್ನು ಸಹ ವಿಚಾರಣೆಗೊಳಪಡಿಸಬೇಕು ಎಂದು ತಿಳಿಸಿದರು.

ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ‘ಕಲಂ 64’ರಡಿಯಲ್ಲಿ ವಿಚಾರಣೆ ನಡೆಸುವಂತೆ ಸಂತ್ರ ಸ್ತರು ಬೆಂಗಳೂರಿನಲ್ಲಿ ಸಹಕಾರಿ ಸಚಿವರನ್ನು ಹಾಗೂ ಸಹಕಾರಿ ಸಂಘಗಳ ನಿಬಂಧಕರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಗ್ರ ತನಿಖೆಗೆ ಒತ್ತಾಯಿಸಿತ್ತು ಎಂದರು.

ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇನಾಮಿ ಹೆಸರಿನಲ್ಲಿ ನೀಡಿರುವ ಸಾಲವನ್ನು ಸ್ವಂತಕ್ಕೆ ಬಳಸಲಗಿತ್ತು ಎಂಬ ತಮ್ಮ ದೂರಿನ ಬಗ್ಗೆ ಇದೀಗ ಸರಕಾರ, ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ 1959ರ ಪ್ರಕಾರ ಉಡುಪಿ ಜಿಲ್ಲೆಯ ಸಹಕಾರಿ ಸಂಘಗಳ ಉಪನಿಬಂಧಕರನ್ನು ವಿಚಾರಣೆಗಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ ಎಂದರು.

ವಿಚಾರಣೆಯ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಲೋಪದೋಷಗಳು ಈ ಬ್ಯಾಂಕಿನಿಂದ ಆಗಿದ್ದು, ಎಲ್ಲಾ ಲೋಪಗಳ ಬಗ್ಗೆ ವಿಚಾರಣೆಗೆ ಸರಕಾರ ಆದೇಶಿಸಿದ್ದು, ಎರಡು ತಿಂಗಳೊಳಗೆ ವರದಿ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಪ್ರಸಾದ್ ಕುಲಾಲ್ ತಿಳಿಸಿದರು.

ತನಿಖಾಧಿಕಾರಿಗಳಿಗೆ ಮನವಿ: ಹೀಗಾಗಿ ಈ ತನಿಖೆಯ ವಿಚಾರಣಾಧಿ ಕಾರಿಯವರು ನಿಷ್ಪಕ್ಷಪಾತ ತನಿಖೆ ನಡೆಸಿ ಸಾಮಾ ಜಿಕ ನ್ಯಾಯ ಒದಗಿಸಿಕೊಟ್ಟು ನೂರಾರು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ತಾವು ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿರ್ಬಂಧಕರಲ್ಲಿ ಮನವಿ ಮಾಡುವುದಾಗಿ ಪ್ರಸಾದ್ ಕುಲಾಲ್ ಹಾಗೂ ನವೀನ್ ಸಾಲ್ಯಾನ್ ತಿಳಿಸಿದರು.

ಇದರೊಂದಿಗೆ ನಕಲಿ ಸಹಿ ಮಾಡಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಗ್ರಾಹಕರ ಹೆಸರಿನಲ್ಲಿ ಸಾಲ ಪಡೆದು ಸ್ವಂತಕ್ಕೆ ಬಳಸಿ ನಂಬಿಕೆ ದ್ರೋಹ ಮಾಡಿರುವುದಾಗಿ ತಿಳಿಸಿದ ಅವರು, ಸಹಿಯೇ ಹಾಕದ ಕೆಲವರ ನಕಲಿ ಸಹಿಯನ್ನು ವಿಧಿವಿಜ್ಞಾನ ತಪಾಸಣೆಗೊಳಪಡಿಸಿ ಸತ್ಯಾಸತ್ಯತೆಯನ್ನು ಬಹಿರಂಗ ಪಡಿಸಬೇಕು ಎಂದವರು ಒತ್ತಾಯಿಸಿದರು.

2023ರ ಮಾ.8ರಿಂದ 2024ರ ಜು.1ರವರೆಗೆ 1413 ಸದಸ್ಯರಿಗೆ ತಲಾ 2 ಲಕ್ಷ ರೂ.ನಂತೆ ಒಟ್ಟು 28.26 ಕೋಟಿ ರೂ. ಸಾಲವನ್ನು ನಕಲಿ ದಾಖಲೆ ಸೃಷ್ಟಿಸಿ ಬೇನಾಮಿ ಹೆಸರಿನಲ್ಲಿ ಸ್ವಂತಕ್ಕೆ ಬಳಸಿರುವ ಬಗ್ಗೆ ಸಹಕಾರಿ ಸಂಘಗಳ ಲೆಕ್ಕ ಪರಿಶಧನಾಧಿಕಾರಿಯಾಗಿರುವ ಕೆ.ಎನ್.ಜಗದೀಶ್ ಅವರು 2023ರ ಜು.10ರಂದು ವರದಿ ನೀಡಿದ್ದು, ಇವರನ್ನು ಕೂಡಾ ವಿಚಾರಣೆಗೊಳ ಪಡಿಸಬೇಕು ಎಂದವರು ತಿಳಿಸಿದರು.

ಎಸ್‌ಐಟಿ ತನಿಖೆಗೆ ಪ್ರಯತ್ನ: ಸರಕಾರ ಈಗಾಗಲೇ ಒಂದು ಹಂತದ ತನಿಖೆಗೆ ಆದೇಶ ನೀಡಿರುವುದು ಹೋರಾಟಗಾ ರರಾದ ನಮಗೆ ಅತ್ಯಂತ ಸಂತೋಷ ತಂದಿದ್ದು, ನ್ಯಾಯ ಸಿಗುವ ಭರವಸೆ ಮೂಡಿಬಂದಿದೆ. ಇಡೀ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ, ಎಸ್‌ಐಟಿ ತನಿಖೆಗೂ ಪ್ರಯತ್ನ ನಡೆಯುತ್ತಿದೆ ಎಂದು ನವೀನ್ ಸಾಲ್ಯಾನ್, ಮಲ್ಪೆ ಶಾಖೆಯ ಮ್ಯಾನೇಜರ್ ಆಗಿದ್ದ ಸುಬ್ಬಣ್ಣ ಅವರ ಆತ್ಮಹತ್ಯೆ ಸಂಶಯಾಸ್ಪದವಾಗಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತಿದ್ದೇವೆ ಎಂದರು.

ಬಾಯಿ ಮುಚ್ಚಿಸುವ ಪ್ರಯತ್ನ: ಸತ್ಯಧರ್ಮದ ನೆಲೆಯಲ್ಲಿ ಹೋರಾಟ ಮಾಡುತ್ತಿರುವ ನಮ್ಮ ಬಾಯಿ ಮುಚ್ಚಿಸಿ, ಹೋರಾಟ ವನ್ನು ಇಲ್ಲಿಗೆ ನಿಲ್ಲಿಸುವಂತೆ ವಾಮಮಾರ್ಗದ ಮೂಲಕ ಪ್ರಯತ್ನ ನಡೆಯುತಿದ್ದು, ಸತ್ಯವನ್ನು ಮುಚ್ಚಿ ಹಾಕುವ ಪ್ರಯತ್ನವನ್ನು ಕೆಲವರು ಮಾಡುತಿದ್ದಾರೆ ಎಂದವರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದೀಪಕ್ ಶೆಣೈ ಹಾಗೂ ಕೋಟ ನಾಗೇಂದ್ರ ಪುತ್ರನ್ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

10 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

11 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

11 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

14 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

14 hours ago