Featured

ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ  : ಯಶ್ ಪಾಲ್ ಸುವರ್ಣ – vishwanews24

ಉಡುಪಿ: ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ  : ಯಶ್ ಪಾಲ್ ಸುವರ್ಣ

ಬ್ಯಾಂಕಿನ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ದಾಖಲೆ ಸೃಷ್ಟಿಸಿ  ಮಾಧ್ಯಮಗಳ ಮುಂದೆ ಸುಳ್ಳು ಮಾಹಿತಿ

ವೈಯಕ್ತಿಕ ತೇಜೋವಧೆಯ ದುರುದ್ದೇಶದಿಂದ ಬ್ಯಾಂಕಿನ ಏಳಿಗೆಯನ್ನು ಸಹಿಸದೇ ಆಧಾರರಹಿತ ಆರೋಪ

ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.

ಬ್ಯಾಂಕಿನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾಧ್ಯಮಗಳ ಮುಂದೆ ಸುಳ್ಳು ಮಾಹಿತಿ ನೀಡುತ್ತಿದ್ದು, ಬ್ಯಾಂಕಿನ ಆಡಳಿತ ಮಂಡಳಿ ಈಗಾಗಲೇ ಕಾನೂನು ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ದೂರು ನೀಡಲಾಗಿದೆ. ಬ್ಯಾಂಕಿನ ವಿರುದ್ಧ ಆರೋಪ ಮಾಡುತ್ತಿರುವ ವ್ಯಕ್ತಿಗಳು ಬ್ಯಾಂಕಿನಲ್ಲಿ ಸಾಲ ಪಡೆದು ಸುಸ್ತಿದಾರರಾಗಿರುವ ಬಗ್ಗೆ ಸಹಕಾರಿ ನ್ಯಾಯಾಲಯದಲ್ಲಿ ಸಾಲ ಮರುಪಾವತಿಗೆ ಆದೇಶ ನೀಡಿದ್ದು ತಪ್ಪಿದಲ್ಲಿ ಆಸ್ತಿ ಜಪ್ತಿಗೂ ಸೂಚನೆ ನೀಡಿದೆ.

ಮಹಾಲಕ್ಷ್ಮೀ ಬ್ಯಾಂಕಿನ ಏಳಿಗೆಯನ್ನು ಸಹಿಸದೇ, ವೈಯಕ್ತಿಕ ತೇಜೋವಧೆಯ ದುರುದ್ದೇಶದಿಂದ ಬ್ಯಾಂಕಿನ ವಿರುದ್ಧ ಆಧಾರರಹಿತ ಆರೋಪದ ಮೂಲಕ ಅವರ ಹತಾಶ ಮನಸ್ಥಿತಿ ಬಯಲಾಗಿದೆ. ಈ ಬಗ್ಗೆ ಶನಿವಾರ ಬ್ಯಾಂಕಿನ ವತಿಯಿಂದ ಪತ್ರಿಕಾಗೋಷ್ಟಿ ನಡೆಸಿ ಎಲ್ಲಾ ದಾಖಲೆಗಳನ್ನು ಒದಗಿಸಿ ಮಾಹಿತಿ ನೀಡಲಾಗುವುದು. ಮಹಾಲಕ್ಷ್ಮೀ ಬ್ಯಾಂಕ್‌ ಸಹಕಾರಿ ಇಲಾಖೆ ಹಾಗೂ ಆರ್ ಬಿ ಐ ನಿಯಮಾವಳಿಯಂತೆ ಸಹಕಾರಿ ತತ್ವದಡಿ ಪಾರದರ್ಶಕ ರೀತಿಯಲ್ಲಿ ಬ್ಯಾಂಕಿಂಗ್‌ ವ್ಯವಹಾರ ನಡೆಸುತ್ತಿದ್ದು, ಈ ಬಗ್ಗೆ ರಾಜ್ಯ ಸಹಕಾರ ಇಲಾಖೆ ಅಥವಾ ಇ ಡಿ, ಸಿ. ಬಿ. ಐ. ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಹಾಗೂ ಬ್ಯಾಂಕಿನ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago