Featured

ಉಡುಪಿ : ಮಹಾ ಮಾನವತಾವಾದಿ ಬಸವಣ್ಣ ಅವರ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಮಹಾ ಮಾನವತಾವಾದಿ ಬಸವಣ್ಣ ಅವರ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ : ಸಮಾಜದಲ್ಲಿನ ಅಸಮಾನತೆ ,ಮೂಡನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ, ಜನಸಾಮಾನ್ಯರಿಗೂ ಅರ್ಥವಾಗುವಂತೆ, ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಅವರು ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಲೋಕದ ಡೊಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ಎಂಬ ಬಸವಣ್ಣ ಅವರ ವಚನದಂತೆ , ಪ್ರತಿಯೊಬ್ಬರೂ ತಮ್ಮ
ಅಂತರ0ಗ ಮತ್ತು ಬಹಿರಂಗ ಶುದ್ದಿಯೊಂದಿಗೆ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಬೇಕು, ವೇದವನ್ನು ಓದಿದವರು ದೊಡ್ಡವರಲ್ಲ, ಜನರ
ವೇದನೆಯನ್ನು ಓದಿದವರು ದೊಡ್ಡವರು ಎಂ¨ ಸಂದೇಶದ0ತೆ, ಜಿಲ್ಲೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ದಿನನಿತ್ಯ ತಮ್ಮ ಕಚೇರಿಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳನ್ನು ಅರಿತು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು, ದೈನಂದಿನ ಬದುಕಿನಲ್ಲಿ ಬಸವಣ್ಣ ಅವರ ವಚನಗಳ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ನಾಡೋಜ ಕೆ.ಪಿ.ರಾವ್, ಬಸವಣ್ಣ ಅವರಲ್ಲಿದ್ದ , ಮನೋ ನೈರ್ಮಲ್ಯ ಮತ್ತು ಸಮದೃಷ್ಠಿ ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ, ಅನುಭವ ಮಂಟಪದ ಮೂಲಕ ಚರ್ಚೆಗಳನ್ನು ನಡೆಸಿ, ಸರಳವಾದ ಭಾಷೆಯಲ್ಲಿ ಜನಸಾಮಾನ್ಯರಿಗೆ ಸಂದೇಶಗಳನ್ನು ನೀಡಿದ , ಬಸವಣ್ಣ ಅವರ ಜನನ ಭುವನದ ಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಅಪರ ಜಿಲ್ಲಾಧಿಕಾರಿ ವೀಣಾ, ಉಡುಪಿ ತಹಸೀಲ್ದಾರ್
ಅರ್ಚನಾ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಡುಪಿ ಚಿತ್ರಕಲಾ ಮಂದಿರದ ಪ್ರಾಂಶುಪಾಲ ನಿರಂಜನ್, ಜಿಲ್ಲಾ ಬಸವ ಸಮಿತಿ ಉಪಾಧ್ಯಕ್ಷ ಸೋಮನಾಥ್, ಕಾರ್ಯದರ್ಶಿ ಸುರೇಶ್, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು, ಕಲಾವಿದ ಶಂಕರ್ ದಾಸ್ ನಿರೂಪಿಸಿ, ವಂದಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago