Featured

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು.

ಘಟನೆ ವಿವರ: ಮಂಚಿ ಕುಮೇರಿ ನಿವಾಸಿ ರಮಾನಾಥ ರೈ ಅವರು ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7ಗಂಟೆ ಸುಮಾರಿಗೆ ಅವರ ಅಕ್ಕನ ಮಗ ಮಿಥುನ್ ಹಾಗೂ ಆತನ ಸ್ನೇಹಿತ ನಾಗೇಶ್ ಪೂಜಾರಿ ಮನೆಗೆ ಬಂದು ಕರೆಗಂಟೆ ಒತ್ತಿದ್ದು, ಪರಿಚಿತರಾಗಿದ್ದರಿಂದ ಸುಮತಿ ಬಾಗಿಲು ತೆರೆದಿದ್ದಾರೆ. ಮನೆಗೆ ಒಳನುಗ್ಗಿದ ಇಬ್ಬರು ಆರೋಪಿಗಳು ಸುಮತಿ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆಯನ್ನು ಹಿಸುಕಿದ್ದಾರೆ. ಪರಿಣಾಮವಾಗಿ ಸುಮತಿ ಪ್ರಜ್ಞಾಹೀನರಾಗಿದ್ದಾರೆ.

ಇದನ್ನೂ ಓದಿ :

ನಂತರ ಆರೋಪಿಗಳು ಅವರನ್ನು ಚೀಲದಲ್ಲಿ ಹಾಕಿ ಸೂಟ್‌ಕೇಸಿನಲ್ಲಿ ತುಂಬಿಸಿ ಸ್ಥಳಾಂತರ ಮಾಡಲು ಯತ್ನಿಸುತ್ತಿದ್ದಾಗ, ರಮಾನಾಥ ರೈ ಹಾಗೂ ನೆರೆಹೊರೆಯವರು ಬಾಗಿಲು ತಟ್ಟಿದ ಹಿನ್ನೆಲೆಯಲ್ಲಿ ಆರೋಪಿಗಳು ಬಾಗಿಲು ತೆರೆದು ಓಡಿ ಹೋಗಲು ಪ್ರಯತ್ನಿಸಿದ್ದಾರೆ. ಆದರೆ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಂತರ ಸೂಟ್‌ಕೇಸನ್ನು ತೆರೆದು ನೋಡಿದಾಗ ಸುಮತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಅವರನ್ನು ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಒಂದು ವಾರ ಚಿಕಿತ್ಸೆ ಬಳಿಕ ಅವರು ಚೇತರಿಸಿ ಕೊಂಡಿದ್ದಾರೆ.

ಇದನ್ನೂ ಓದಿ :

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಅವರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿ, ಜೀವಾವಧಿ ಶಿಕ್ಷೆ ಹಾಗೂ ತಲಾ 20,000 ರೂ. ದಂಡ, ಕಲಂ 325ರಡಿ – 5 ವರ್ಷ ಕಠಿಣ ಶಿಕ್ಷೆ ಹಾಗೂ ತಲಾ 5,000ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಇದಲ್ಲದೆ, ವಸೂಲಾದ ದಂಡದಲ್ಲಿ 45,000ರೂ.ವನ್ನು ಗಾಯಾಳು ಸುಮತಿ ಅವರಿಗೆ ಪರಿಹಾರವಾಗಿ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಜಯರಾಮ ಶೆಟ್ಟಿ ವಾದ ಮಂಡಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

6 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

6 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

6 hours ago