ಉಡುಪಿ : ಮಹಿಳೆ ನಾಪತ್ತೆ – vishwanews24

Featured, ಉಡುಪಿ

ಉಡುಪಿ : ಮಹಿಳೆ ನಾಪತ್ತೆ

ಉಡುಪಿ : ಮೂಲತಃ ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Leave a Reply