ಉಡುಪಿ: ದಸರಾದಲ್ಲಿ ದೇವಿಯರನ್ನು ನಾವು ಆರಾಧನೆ ಮಾಡುತ್ತೇವೆ. ಮಹಿಷಾ ದಸರಾ ಮೂಲಕ ನಮ್ಮ ನಂಬಿಕೆಯನ್ನು ಪ್ರಶ್ನೆ ಮಾಡುವ ಶಕ್ತಿಗಳು ಹುಟ್ಟಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ನಮ್ಮ ನಂಬಿಕೆ ನಮ್ಮದು ದೇಶದಲ್ಲಿ ಎಲ್ಲರಿಗೂ ಅವಕಾಶ ಇದೆ. ಆಸ್ತಿಕರಿಗೂ ನಾಸ್ತಿಕರಿಗೂ ನಮ್ಮ ದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಬಹುದು. ವಿಕೃತವಾದ ಮಹಿಷಾ ದಸರಾದಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂದರು. ಯಾವ ಆಧಾರದಲ್ಲಿ ಮಹಿಷಾ ದಸರಾ ಆಚರಣೆ ಮಾಡುತ್ತೀರಿ ಗೊತ್ತಿಲ್ಲ, ಇದರ ಹಿಂದೆ ಇರುವ ಶಕ್ತಿ ಯಾವುದು ಗೊತ್ತಿಲ್ಲ.. ಆದರೆ ಉಡುಪಿ ಎಂಬ ಧಾರ್ಮಿಕ ಜಿಲ್ಲೆಯಲ್ಲಿ ಮಹಿಷಾ ದಸರ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಶ್ರೀ ಕೃಷ್ಣ, ಮಹಾಕಾಳಿ -ಕೊಲ್ಲೂರು ಮೂಕಾಂಬಿಕೆ ಇರುವ ನಾಡು ಉಡುಪಿ. ನಿಮ್ಮ ಮಾನಸಿಕತೆಯನ್ನು ಜಿಲ್ಲೆಯ ಜನ ಅರ್ಥ ಮಾಡಿಕೊಳ್ಳುತ್ತಾರೆ. ನಿಮ್ಮ ವಿಕೃತಿಯನ್ನು ನಿಲ್ಲಿಸಿ ಆಸ್ತಿಕರ ನಂಬಿಕೆಗೆ ಬೆಲೆಕೊಡಿ. ದೇವಿ ದುಷ್ಟರನ್ನು ರಾಕ್ಷಸರನ್ನು ಸಂಹಾರ ಮಾಡಿದವಳು ಎಂಬ ನಂಬಿಕೆಯಿದೆ. ದುಷ್ಟರ ಸಂಹಾರ ಮಾಡಲು ನಿಮಗೆ ಏನು ಸಮಸ್ಯೆ ಆಗಿದೆ ನನಗೆ ಅರ್ಥವಾಗುತ್ತಿಲ್ಲ. ಮಹಿಷಾ ದಸರ ಮಾಡುವವರು ಮರು ಚಿಂತನೆ ಮಾಡಿ ಎಂದು ಶೋಭಾ ಕರಂದ್ಲಾಜೆ ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…