Featured

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ – Vishwanews24

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ0ದಿಸಿದ0ತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ.
ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ, ಸಾಲಿಗ್ರಾಮದ ಸೀತಾ ನದಿಯ ಹಿನ್ನೀರಿನಲ್ಲಿ ನಡುವಿನ ದಟ್ಟ ಕಾಂಡ್ಲಾವನದ ನಡುವೆ ಕಯಾಕಿಂಗ್ ಮಾಡಲು ಬಳಸುವ ದೋಣಿಗಳ ಮೂಲಕ ಮತದಾನ ಜಾಗೃತಿಯ ಸಂದೇಶವನ್ನು ಸಾರಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಬಳಿಯ ಕಯಾಕಿಂಗ್ ಪಾಯಿಂಟ್ ಬಳಿಗೆ ತೆರಳಿದ ,ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕೂರ್ಮರಾವ್ ಎಂ , ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ , ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್, ಅವರು ಕಯಾಕಿಂಗ್ ಪ್ರಾರಂಭದ ಸ್ಥಳದಲ್ಲಿ ತುಳುನಾಡಿನ ಸಾಂಪ್ರದಾಯಿಕ ಅಡಿಕೆ ಮುಟ್ಟಾಳೆ ಧರಿಸಿ, ಸ್ಥಳದಲ್ಲಿ ಅಳವಡಿಸಲಾಗಿದ್ದ ನೈತಿಕ ಮತದಾನ ಪ್ರತಿಜ್ಞೆ ಕುರಿತ ಫಲಕದಲ್ಲಿ ಸಹಿ ಮಾಡಿ, ಸಂಪೂರ್ಣ ಸುರಕ್ಷತಾ ಉಪಕರಣಗಳನ್ನು ಧರಿಸಿ ಕಯಾಕಿಂಗ್ ಆರಂಭಿಸಿದರು.

ಸುಮಾರು ೩೦ ನಿಮಿಷಗಳ ಕಯಾಕಿಂಗ್ ನಂತರ ಮಾಂಗ್ರೋವ್ ಕಾಡುಗಳ ಮಧ್ಯೆ ಇರುವ ಪ್ರದೇಶದಲ್ಲಿ ಸುಮಾರು ೪೦ ಕ್ಕೂ ಹೆಚ್ಚು ಕಯಾಕ್ ದೋಣಿಗಳ ಮೂಲಕ ಮತದಾನ ದಿನವಾದ, ಮೇ ೧೦ ದಿನಾಂಕದ ಚಿತ್ರಣ ರೂಪಿಸಿ ಮತ್ತು ಮತದಾನ ಜಾಗೃತಿಯ ಫಲಕವನ್ನು ನೀರಿನ ಮೇಲೆ ಪ್ರದರ್ಶಿಸಿ ಅತ್ಯಂತ ಆಕರ್ಷಕ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.

ಕಯಾಕಿಂಗ್ ನ ಆರಂಭದ ಸ್ಥಳದಿಂದ ನದಿ ಮಧ್ಯದ ಕಾರ್ಯಕ್ರಮ ನಡೆಯವ ಸ್ಥಳದ ವರೆಗೂ ನದಿಯಲ್ಲಿ ಮತದಾನ ಜಾಗೃತಿ ಸಾರುವ ಯಕ್ಷಗಾನ ಮುಖುಟ ಮಾದರಿಯ ಆಕೃತಿಗಳು ಗಮನ ಸೆಳೆದವು.

ಇದೇ ಸಂದರ್ಭದಲ್ಲಿ, ಕಯಾಕಿಂಗ್ ಮೂಲಕ ಆ ಪ್ರದೇಶಕ್ಕೆ ಆಗಮಿಸಿದ್ದ ಮಣೂರು ಪಡುಕೆರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಭೋಧಿಸಿ,ಮತದಾನ ದಿನಾಂಕವನ್ನು ಒಳಗೊಂಡ ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಕೂಡಾ ಜಾಗೃತಿ ಮೂಡಿಸಲಾಯಿತು.
ಈ ವಿಶಿಷ್ಠ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಕಯಕಿಂಗ್ ಪಾಯಿಂಟ್ ನಲ್ಲಿ ಕಾರ್ಯನಿರ್ವಹಿಸುವ ವಿವಿಧ ಸಂಸ್ಥೆಗಳು ಮತ್ತು ಸಿಬ್ಬಂದಿ ಅಗತ್ಯ ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು.

ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಹಿನ್ನಿರಿನಲ್ಲಿ ಮಾಂಗ್ರೋವ್ ವನದ ನಡುವೆ ಕಯಾಕ್ ಗಳ ಮೂಲಕ ವಿಶಿಷ್ಠ ಮತ್ತು ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಗಿದೆ. ಪ್ರವಾಸಿ ತಾಣಗಳು ಹಾಗೂ ಸಾಹಸ ಚಟುವಟಿಕೆಗಳು ನಡೆಯುವ ಸ್ಥಳಗಳು ಯುವ ಜನತೆಯನ್ನು ಹೆಚ್ಚು ಆಕರ್ಷಿಸಲಿದ್ದು, ಇಲ್ಲಿ ನಡೆಸುವ ಮತದಾನ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ ಜನತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ಸೆಳೆಯಲು ಸಹಕಾರಿಯಾಗಲಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago