Featured

ಉಡುಪಿ : ಮಾಜಿ ತಾ.ಪಂ ಸದಸ್ಯ, ಶಿರ್ವ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಕೆ. ಕೃಷ್ಣ (ಕುಟ್ಟಿ) ಪೂಜಾರಿ ನಿಧನ -Vishwanews24

ಉಡುಪಿ : ಮಾಜಿ ತಾ.ಪಂ ಸದಸ್ಯ, ಶಿರ್ವ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಕೆ. ಕೃಷ್ಣ (ಕುಟ್ಟಿ) ಪೂಜಾರಿ ನಿಧನ -Vishwanews24

ಉಡುಪಿ: ತಾಲೂಕು ಪಂಚಾಯತ್‌ ಮಾಜಿ ಸದಸ್ಯ, ಗ್ರಾಮೀಣ ಕಾಂಗ್ರೆಸ್‌ ಸಮಿತಿಯ ಅಧ್ಯಕ್‌ ಸೊರ್ಪು ತುಂಡುಬಲ್ಲೆ ನಿವಾಸಿ ಕೆ. ಕೃಷ್ಣ (ಕುಟ್ಟಿ) ಪೂಜಾರಿ ತುಂಡುಬಲ್ಲೆ (64) ಅವರು ಬುಧವಾರ ಸ್ವಗೃಹದಲ್ಲಿ ನಿಧನ ಹೊಂದಿದರು.

ಹಿರಿಯ ಕಾಂಗ್ರೆಸ್‌ ಧುರೀಣರಾಗಿದ್ದ ಅವರು ಕಾಪು ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ, ಶಿರ್ವ ಗ್ರಾಪಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಶಿರ್ವ ಸಹಕಾರಿ ಸಂಘದ ನಿರ್ದೇಶಕರಾಗಿ, ಬಿಲ್ಲವ ನಾಯಕರಾಗಿ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಳೆದಬಾರಿ ನಡೆದ ಗ್ರಾಮ ಪಂಚಾಯತ್‌ ಚುನಾವಣೇಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಡವರಿಗೆ ಸಹಾಯ ಹಸ್ತ ಚಾಚುತ್ತಿದ್ದ ಕುಟ್ಟಿ ಪೂಜಾರಿಯವರ ನಿಧನಕ್ಕೆ ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಇಗ್ನೇಷಿಯಸ್ ಡಿಸೋಜ, ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೆಲ್ವಿನ್ ಡಿಸೋಜಾ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ವಿಲ್ಸನ್ ರೊಡ್ರಿಗಸ್ , ಗೀತಾ ವಾಗ್ಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ರಮೇಶ್ ಬಂಗೇರ ರತನ್ ಕುಮಾರ್ ಶೆಟ್ಟಿ ಸಂತೋಷ್ ಪೂಜಾರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಮರಾಯ ಪಾಟ್ಕರ್ ಉಪಾಧ್ಯಕ್ಷರಾದ ಗ್ರೇಸಿ ಕಾರ್ಡೋಜಾ ,ಹಸನಬ್ಬ ಶೇಖ್ ,ಸುಧೀರ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ ಸಂತಾಪ ಸೂಚಿಸಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ತಾಲ್ಲೂಕು ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ಶಿರ್ವ ಸೊಸೈಟಿಯ ನಿರ್ದೇಶಕರಾಗಿ ಬಿಲ್ಲವ ಸಮಾಜದ ಮುಖಂಡರಾಗಿ,ಹೋಟೆಲ್ ಉದ್ಯಮಿಯಾಗಿ ಜನರ ಸೇವೆ ಸಲ್ಲಿಸಿದ ಧೀಮಂತ ವ್ಯಕ್ತಿ. ಶಿರ್ವ ಗ್ರಾಮೀಣ ಕಾಂಗ್ರೆಸ್ ನ ಚುಕ್ಕಾಣಿ ಹಿಡಿದು ಕಳೆದ ಬಾರಿ ನಡೆದ ಗ್ರಾಪಂ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಅವರ ಪಾತ್ರ ಮಹತ್ತರವಾದದ್ದು ತಮಗೆ ಅಸೌಖ್ಯವಿದ್ದರೂ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರದಲ್ಲಿ ಭಾಗವಹಿಸಿದ್ದರು.

ಸದಾ ಬಡವರ ಪರ ತಮ್ಮ ಜೀವನವನ್ನೇ ಸಮರ್ಪಿಸಿದವರು. ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ ಕುಟ್ಟಿಯಣ್ಣನವರು ತಮ್ಮ ಬಳಿ ಬಂದವರಿಗೆ ಬರಿಗೈಯಲ್ಲಿ ಕಳುಹಿಸಿದವರಲ್ಲ. ಯಾವತ್ತು ಕೂಡ ತಮ್ಮ ಅನಾರೋಗ್ಯದ ಬಗ್ಗೆ ಚಿಂತಿಸದೆ ಸಮಾಜಸೇವೆ ಮಾಡುತ್ತಿದ್ದರು. ಅನೇಕ ಯುವಕರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಿದವರು. ಅಸೌಖ್ಯದಲ್ಲಿದ್ದರೂ ಸದಾ ಕಾಂಗ್ರೆಸ್ ಪಕ್ಷದ ಪರ ಅವರ ಅಭಿಮಾನ ಹಾಗೆಯೇ ಇತ್ತು. ಕುಟ್ಟಿಯಣ್ಣನವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯಿಂದ ಅವರ ಕುಟುಂಬಕ್ಕೆ ಆದ ನಷ್ಟವನ್ನು ದೇವರು ಭರಿಸಲಿ ಎಂದು ಕೋರಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕಾಪು ಬ್ಲಾಕ್‌ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೆಲ್ವಿನ್‌ ಡಿಸೋಜಾ ತಮ್ಮ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago