Featured

ಉಡುಪಿ:  ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ ..?: vishwanews24

ಉಡುಪಿ:  ಮಾಜಿ ಶಾಸಕ, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರನ್ನು ಮರೆತುಬಿಟ್ಟಿತೆ ಜಿಲ್ಲಾ ಬಿಜೆಪಿ.?

ಕೇಂದ್ರ ಮಾಜಿ ಸಚಿವರ ಉಪಸ್ಥಿತಿಯ ಸಭೆಯಲ್ಲಿ ಮೌನ‌ಪ್ರಾರ್ಥನೆಯೂ ಸಲ್ಲಿಸದೆ ಸದಸ್ಯತ್ವ ಅಭಿಯಾನ ಸಭೆ ನಡೆಸಿದ ಜಿಲ್ಲಾ ಬಿಜೆಪಿ -ಕಾರ್ಯಕರ್ತರಲ್ಲಿ ಅಸಮಾಧಾನ..

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷ ಆಯ್ಕೆಯ ನಂತರ ದಿನದಿಂದ ದಿನಕ್ಕೆ ಗೊಂದಲ ಹಾಗೂ ಅಸಮಾಧಾನ ಕೇಳಿ ಬರುತ್ತಿದ್ದು ಈ ನಡುವೆ ಇಂದು ಮತ್ತೊಂದು ಬೇಸರದ ಸಂಗತಿ ಹೊರಬಿದ್ದಿದೆ.

ಸೋಮವಾರ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಬಗ್ಗೆ ಕೇಂದ್ರದ ಮಾಜಿ ಸಚಿವ ಭಗವಂತ ಖುಬಾ ಅವರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು.

ಸಭೆ ಆರಂಭಿಸುವ ಮುನ್ನಾ ಕನಿಷ್ಠಪಕ್ಷ ಉಡುಪಿ ಜಿಲ್ಲಾ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರು ಆಗಿದ್ದ ಕೀರ್ತಿಶೇಷ ಕೆ .ಲಕ್ಷ್ಮೀನಾರಾಯಣ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಸೌಜನ್ಯ ತೋರದಿರುವ ಬಗ್ಗೆ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿದೆ.

ಶುಕ್ರವಾರದಂದು ದಿವಂಗತರಾಗಿದ್ದ ಮಾಜಿ ಶಾಸಕ ಕೆ .ಲಕ್ಷ್ಮಿ ನಾರಾಯಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸದೆ ಜಿಲ್ಲಾ ಸಭೆ ನಡೆಸಿದ ಜಿಲ್ಲಾಧ್ಯಕ್ಷರ ನಡೆಯ ಬಗ್ಗೆ ಸಭೆಯಲ್ಲಿದ್ದ ಹಲವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ “ಹಿರಿಯ ನಾಯಕ:- ಸದ್ಯದ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅನ್ಯ ಪಕ್ಷದವರಿಂದ ನಡೆಸಲ್ಪಡುತ್ತಿದೆ ಅನ್ನಿಸತೊಡಗಿದೆ.ಪಕ್ಷಕ್ಕಾಗಿ ದುಡಿದ ಕೆ.ಲಕ್ಷ್ಮೀನಾರಾಯಣ ಅವರಿಗೆ ಶೃದ್ದಾಂಜಲಿ ಸಭೆ ಕೂಡ ಮಾಡಿಲ್ಲ ಕನಿಷ್ಠ ಪಕ್ಷ ಮೌನ ಪ್ರಾರ್ಥನೆ ಮಾಡಿಯಾದರೂ ಸಭೆ ಆರಂಭಿಸುವುದು ಸೌಜನ್ಯ ಅದು ನಡೆಸಿಲ್ಲ ಅಂದರೆ ವಿಪರ್ಯಾಸವೆಂದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

13 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

13 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

14 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

14 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

16 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

16 hours ago