Featured

ಉಡುಪಿ :ಮಾಜಿ ಶಾಸಕ ರಘುಪತಿ ಭಟ್‌ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಆರೋಪಿ ಅತುಲ್‌ ರಾವ್‌ ಖುಲಾಸೆ – vishwanews24

ಉಡುಪಿ ಮಾಜಿ ಶಾಸಕ ರಘುಪತಿ ಭಟ್‌ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ : ಆರೋಪಿ ಅತುಲ್‌ ರಾವ್‌ ಖುಲಾಸೆ

ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್‌ ರಾವ್‌ ಖುಲಾಸೆಗೊಂಡಿದ್ದಾರೆ.

ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ತೀರ್ಪು ನೀಡಿದೆ.

ಈ ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್‌ ರಾವ್‌ ವಿರುದ್ಧ ಪ್ರಕರಣ ದಾಖಲಾಗಿತ್ತು.
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ವಿಚಾರದಲ್ಲಿ ಭಟ್‌ ಬಾಲ್ಯ ಸ್ನೇಹಿತ, ಅತುಲ್‌ ರಾವ್‌ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ 2008ರ ಜೂ. 19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯವು 2023ರ ನ.10ರಂದು ಆರೋಪಿ ಅತುಲ್‌ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಇದರ ವಿರುದ್ಧ ಅತುಲ್‌ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಆರೋಪಿ ಅತುಲ್‌ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿಗಳಾದ ಅರುಣ್‌ ಬಂಗೇರ ಹಾಗೂ ಸ್ಟೀವನ್‌ ಲೂಯಿಸ್‌ ವಾದ ಮಂಡಿಸಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

9 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

10 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

11 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

12 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

12 hours ago