Judge and gavel in courtroom
ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್ ರಾವ್ ಖುಲಾಸೆಗೊಂಡಿದ್ದಾರೆ.
ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಅತುಲ್ ರಾವ್ ವಿರುದ್ಧ ಪ್ರಕರಣ ದಾಖಲಾಗಿತ್ತು.
2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ಈ ವಿಚಾರದಲ್ಲಿ ಭಟ್ ಬಾಲ್ಯ ಸ್ನೇಹಿತ, ಅತುಲ್ ರಾವ್ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ 2008ರ ಜೂ. 19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯವು 2023ರ ನ.10ರಂದು ಆರೋಪಿ ಅತುಲ್‌ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಇದರ ವಿರುದ್ಧ ಅತುಲ್ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿಗಳಾದ ಅರುಣ್ ಬಂಗೇರ ಹಾಗೂ ಸ್ಟೀವನ್ ಲೂಯಿಸ್ ವಾದ ಮಂಡಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…