Featured

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ: ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ – vishwanews24

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ: ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ, ದಂಡ

ಉಡುಪಿ: 2008 ಜೂನ್ 10ರಂದು ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

ಶಾಸಕ‌ ರಘುಪತಿ‌ಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್‌, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿದೆ.

ಕಾರನ್ನು ಅಲ್ಲೇ ಬಿಟ್ಟು ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದು ಹೋಗಿದ್ದನು. ಕುಮಟಾಕ್ಕೆ ಬೆಂಗಳೂರಿನ ಚಾಲಕನೋರ್ವನನ್ನು ಕರೆಸಿ, ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದನು. ಇತ್ತ ಪದ್ಮಪ್ರಿಯ ಅವರನ್ನು ಅತುಲ್ ರಾವ್‌ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದನು. ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸನ್ಸ್‌ಗೆ ಪದ್ಮಪ್ರಿಯ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿದ್ದನು.

ಈ ಘಟನೆ ನಡೆಯುವ ಮೊದಲು ದೆಹಲಿಗೆ ಹೋಗಿದ್ದ ಅತುಲ್ ರಾವ್‌, ಅಲ್ಲಿ ಮನೆ ಬಾಡಿಗೆ ಪಡೆದು ಕೊಂಡಿದ್ದನು. ಅದಕ್ಕೆ ಬೆಂಗಳೂರಿನ ನಕಲಿ ವಿಳಾಸ ನೀಡಿ ಬಾಡಿಗೆ ಕರಾರು ಪತ್ರಕ್ಕೆ ನೀಡಿದ್ದನು. ಇದು ಅಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಾಣಿಯಾಗಿತ್ತು. ಆ ಬಾಡಿಗೆ ಕರಾರು ಪತ್ರದಿಂದಲೇ ಅತುಲ್ ರಾವ್‌ ಅಲ್ಲಿ ಬ್ಯಾಂಕ್ ಖಾತೆ ತೆರೆದಿದ್ದನು. ಅತುಲ್ ರಾವ್‌ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿ ಪಿಡುಬ್ಲ್ಯುಡಿ ಇಲಾಖೆಯಲ್ಲಿ ಕರ್ಕ್ ಆಗಿದ್ದರೂ ಅಲ್ಲಿ ತನ್ನ ವಿದ್ಯಾರ್ಹತೆಯನ್ನು ಬಿಇ ಮತ್ತು ಇಂಟಲ್ ಕಂಪೆನಿಯಲ್ಲಿ ಇಂಜಿನಿಯರ್ ಎಂಬುದಾಗಿ ಉಲ್ಲೇಖ ಮಾಡಿದ್ದನು ಎಂದು ದೂರಲಾಗಿದೆ.

ದೆಹಲಿಯಲ್ಲಿ ಬಾಡಿಗೆ ರೂಮಿಗೆ ಓಡಾಟ ನಡೆಸುತ್ತಿದ್ದಾಗ ಲಾಡ್ಜ್‌ನಲ್ಲಿಯೂ ಬೆಂಗಳೂರಿನ ನಕಲಿ ವಿಳಾಸವನ್ನು ನೀಡುತ್ತಿದ್ದನು. ಜೂ.10ರಂದು ದೆಹಲಿ ಹೋಗಿದ್ದ ಅತುಲ್, ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್ ಮಾಡಿದ್ದನು. ಅಲ್ಲಿಂದ ಜೂ.12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್ ಜೊತೆ ಪದ್ಮಪ್ರಿಯ ಅವರನ್ನು ಹುಡುಕುವ ನಾಟಕ ಮಾಡಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾರಂಭಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಠಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರುಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು.

ಇದರಲ್ಲಿ ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಐಪಿಸಿ 468ಕಾಯಿದೆ ಯಡಿ ಒಂದು ವರ್ಷ ಜೈಲುಶಿಕ್ಷೆ ಮತ್ತು 5000ರೂ. ದಂಡ, ಐಪಿಸಿ 417, 465, 471 ಕಾಯಿದೆಯಡಿ ತಲಾ ಆರು ತಿಂಗಳು ಸಜೆ ಹಾಗೂ 5000ರೂ. ದಂಡ ವಿಧಿಸಿ ಆದೇಶ ನೀಡಿದರು. ಸಿಓಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago