Featured

ಉಡುಪಿ: ಮಾಜಿ ಸಿಎಂ ಎಸ್ಎಂ‌ ಕೃಷ್ಣ ನಿಧನ ; ಪೇಜಾವರ ಶ್ರೀ ತೀವ್ರ ಸಂತಾಪ – vishwanews24

ಉಡುಪಿ: ಮಾಜಿ ಸಿಎಂ ಎಸ್ಎಂ‌ ಕೃಷ್ಣ ನಿಧನ ; ಪೇಜಾವರ ಶ್ರೀ ತೀವ್ರ ಸಂತಾಪ

ಉಡುಪಿ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ .‌ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿಯೂ ಉತ್ತಮ ಕಾರ್ಯನಿರ್ವಹಿಸಿದ್ದು ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ ಸಾವಿರಾರು ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಿ ಜೀವನದ ದಾರಿಯನ್ನು ತೆರೆದಿಡುವಲ್ಲಿ ಅವರ ದೂರದೃಷ್ಟಿಯ ಪಾತ್ರ ಸದಾ ಸ್ಮರಣೀಯ.‌

ಸಜ್ಜನಿಕೆ ,ಸಭ್ಯತೆ , ಸದಾಚಾರ ಮತ್ತು ಧರ್ಮ ಸಂಪನ್ನರೂ ಆಗಿದ್ದು ಶ್ರೀಮಠದ ಹಾಗೂ ನಮ್ಮ ಗುರುಗಳ ವಿಶೇಷ ಭಕ್ತರಾಗಿದ್ದರು .‌ ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪಂಚಮ ಶ್ರೀ ಕೃಷ್ಣ ಪರ್ಯಾಯದ ಸಂದರ್ಭದಲ್ಲಿ ರಾಷ್ಟ್ರ ರತ್ನ ಬಿರುದಿನೊಂದಿಗೆ ಸಂಮಾನಿಸಿದ್ದನ್ನು ಸ್ಮರಿಸುತ್ತೇವೆ .

ಗುರುಗಳ ಬಳಿಕ ನಮ್ಮ ಮೇಲೂ ಅದೇ ಅಭಿಮಾನ‌,ಭಕ್ತಿ ಪ್ರೀತಿಯನ್ನು ಹೊಂದಿದ್ದ ಕೃಷ್ಣ ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ; ಅವರ ಕುಟುಂಬಕ್ಕೂ ಅವರ ವಿಯೋಗದ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀ ಕೃಷ್ಣಪರಮಾತ್ಮನಲ್ಲಿ ಪ್ರಾರ್ಥಿಸಿದ್ದಾರೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

5 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

9 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

10 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

10 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

11 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

11 hours ago