ಉಡುಪಿ: ಇಲ್ಲಿನ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಪಬ್ಲಿಕ್ ಹೀರೋ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ. ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮುಂಬೈನಲ್ಲಿ ಮಾಸ್ಕ್ ಕಡ್ಡಾಯವಲ್ಲ
ಶಾನುಭಾಗ್ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಪೂರಕವಾಗಿ ಸ್ಪಂದಿಸಲಾಗಿದೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು ಎಂದು ಕೆಎಂಸಿ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…