Featured

ಉಡುಪಿ : ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು , ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕರೋನಾ ಸಂಬoಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ.

ಅದಾಗ್ಯೂ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕ ವರ್ತನೆಯನ್ನು ತೋರುತ್ತಿರುವುದರಿಂದ, ಕರೋನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕೋವಿಡ್-19 ರೋಗದ 3 ನೇ ಅಲೆಯು ತಲೆದೋರುತ್ತಿರುವುದನ್ನು ಆರೋಗ್ಯ ಇಲಾಖೆಯು ಎಚ್ಚರಿಸಿರುವುದು ಆತಂಕಕಾರಿ ಸಂಗತಿಯಾಗಿದೆ.

ಇAತಹ ಸನ್ನಿವೇಶದಲ್ಲಿ ಸಾರ್ವಜನಿಕರು , ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಹಾಗೂ ಇನ್ನಿತರ ಕೋವಿಡ್-19 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುವಂತೆ ಮಾಡಲು, ಇನ್ನು ಮುಂದೆ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು.

ಈ ಬಗ್ಗೆ ಜಿಲ್ಲೆಯಲ್ಲಿ ಕೊರೋನಾ ಸಂಬAಧಿತ ನಿಯಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಯವರಿಂದ ಅಧಿಕಾರ ಪ್ರತ್ಯಾಯೋಜಿಸಲ್ಪಟ್ಟ ಅಧಿಕಾರಿಗಳು, ಸಾರ್ವಜನಿಕರ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವವರನ್ನು ಕಡ್ಡಾಯವಾಗಿ ಹತ್ತಿರದ ಕೋವಿಡ್-19 ಪರೀಕ್ಷಾ ಕೇಂದ್ರಗಳಲ್ಲಿ, ಕೋವಿಡ್-19 ಪರೀಕ್ಷೆಗೆ ಒಳಪಡಿಸುವುದು ಮತ್ತು ಅಂತಹ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ತಾಲೂಕು ವೈದ್ಯಾಧಿಕಾರಿಗಳಿಗೆ ನೀಡುವುದು.

ಈ ಸಂಧರ್ಭದಲ್ಲಿ ಪ್ರತಿರೋಧ ಒಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

9 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

9 hours ago