ಉಡುಪಿ:  ಮಾ. 1 ರಿಂದ ಸರಕಾರಿ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ – Vishwanews24

Featured, ಉಡುಪಿ

ಉಡುಪಿ:  ಮಾ. 1 ರಿಂದ ಸರಕಾರಿ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ

ಉಡುಪಿ: ಫೆಬ್ರವರಿ 21 ರಂದು ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ ತಾಲ್ಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು-ಪದಾಧಿಕಾರಿಗಳ “ತುರ್ತುರಾಜ್ಯಕಾರ್ಯಕಾರಿಣಿ ಸಭೆ” ಯಲ್ಲಿರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಪಡಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರುಕರ್ತವ್ಯಕ್ಕೆಗೈರು ಹಾಜರಾಗುವ ಮೂಲಕ ಮಾರ್ಚ್ 1 ರಿಂದ ‘ಅನಿರ್ಧಿಷ್ಟಾವಧಿ ಮುಷ್ಕರ’ಕ್ಕೆ ಕರೆ ನೀಡಲು 8000 ಚುನಾಯಿತ ಪ್ರತಿನಿಧಿಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯದ 2023-24ನೇ ಸಾಲಿನ ಆಯ-ವ್ಯಯದಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ಸಂಬ0ಧಿಸಿದ0ತೆ ಯಾವುದೇ ಪ್ರಸ್ತಾಪ ಮಾಡದಿರುವುದು ಸಹಜವಾಗಿಯೇನೌಕರರಲ್ಲಿ ನಿರಾಶೆ ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನಆಯೋಗದ ಸೌಲಭ್ಯಗಳನ್ನು ಜು.1,2022 ರಿಂದ ಜಾರಿಗೊಳಿಸಬೇಕಾಗಿತ್ತು.

ಪಡುಬೆಳ್ಳೆ: ಮನೆಗೆ ಮನೆಗೆ ತೆರಳಿ ಅನಧಿಕೃತವಾಗಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸುತ್ತಿದ್ದ ಸಂಶಯಾಸ್ಪದ ನಾಲ್ಕು ಮಂದಿ ಪೊಲೀಸ್‌ ವಶಕ್ಕೆ – Vishwanews24

ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವುರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್‌ರಾವ್‌ಅವರಅಧ್ಯಕ್ಷತೆಯಲ್ಲಿ 7ನೇ ವೇತನಆಯೋಗವನ್ನು ರಚಿಸಿದ್ದು, ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬ0ಧಿಸಿದAತೆ ವಿಸ್ತೃತ ವರದಿಯನ್ನು ಸಿದ್ದಪಡಿಸಿ ಸಲ್ಲಿಸಿತ್ತು.

ರಾಜ್ಯ ಸರ್ಕಾರದಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದುಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರುಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದಜವಾಬ್ದಾರಿಯಾಗಿದ್ದಾಗ್ಯೂ ನಿರ್ಲಕ್ಷö್ಯ ವಹಿಸಿರುವುದಕ್ಕೆ ಸಭೆಯುಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿ ಮಾರ್ಚ್ 1 ರಿಂದ ರಿಂದರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ‘ಅನಿರ್ಧಿಷ್ಟಾವಧಿ ಮುಷ್ಕರ’ ಕ್ಕೆ ಕರೆ ನೀಡಲು ನಿರ್ಣಯಕೈಗೊಂಡಿದೆ.
ಸಂಘದ ಪ್ರಮುಖ ಬೇಡಿಕೆಗಳು : ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ಜು.1,2022 ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನಆಯೋಗದ ಮಾದರಿಯಂತೆ7ನೇ ವೇತನಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು, ಚುನಾವಣೆ ನೀತಿ ಸಂಹಿತೆಜಾರಿಗೆ ಮೊದಲು ಶೇ. 40% ಫಿಟ್‌ಮೆಂಟ್ ಸೌಲಭ್ಯವನ್ನು ಜು.1,2022 ರಿಂದ ಜಾರಿಗೆ ಬರುವಂತೆ ಸರ್ಕಾರಿಆದೇಶ ಹೊರಡಿಸುವುದು.

ರಾಜ್ಯದಎನ್.ಪಿ.ಎಸ್. ನೌಕರರಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕುಅತ್ಯಂತಕಷ್ಟಕರವಾಗಿರುವುದರಿAದಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆತರುವುದು ಸರ್ಕಾರದಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತಿಸ್‌ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತ0ದಿದ್ದು, ಅದೇ ಮಾದರಿಯಲ್ಲಿಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿಯೋಜನೆಯನ್ನು ಜಾರಿಗೊಳಿಸುವುದು.

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ – ಮನನೊಂದು ಗೃಹಿಣಿ ಆತ್ಮಹತ್ಯೆ – Vishwanews24

ಆದ್ದರಿಂದ ಮಾರ್ಚ್ 1 ರಿಂದ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ‘ ಅನಿರ್ಧಿಷ್ಟಾವಧಿ ಮುಷ್ಕರ’ವನ್ನು ಬೆಂಬಲಿಸುವುದೊAದರಿಗೆ ಯಶಸ್ವಿಗೊಳಿಸಲು ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ-ನೌಕರರಲ್ಲಿ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply