Featured

ಉಡುಪಿ : ಮಾ.20ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ.ಸುಶೀಲಾ ಉಪಾಧ್ಯಾಯ ಸಂಸ್ಮರಣೆ -Vishwanews24

ಉಡುಪಿ : ಮಾ.20ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ.ಸುಶೀಲಾ ಉಪಾಧ್ಯಾಯ ಸಂಸ್ಮರಣೆ

ಉಡುಪಿ,: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೋಟ ಡಾ.ಕಾರಂತ ಪ್ರತಿಷ್ಠಾನದ ಸಹಕಾರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಬ್ಯಾರಿ ಭಾಷಿಕರ ವರ್ಣನಾತ್ಮಕ ವ್ಯಾಕರಣ ಮತ್ತು ತೌಲನಕ ಅಧ್ಯಯನ ಗ್ರಂಥ ರಚಿಸಿ ಪಿಎಚ್‌ಡಿ ಪಡೆದ ಹಾಗೂ ಅಕಾಡೆಮಿಯ ಪ್ರಥಮ ಅವಧಿಯ ಸದಸ್ಯರು ಆಗಿದ್ದ ಡಾ.ಪಿ.ಸುಶೀಲ ಉಪಾಧ್ಯಾಯರವರ ಸಂಸ್ಮರಣಾ ಕಾರ್ಯಕ್ರಮವು ಮಾ.20ರಂದು ಅಪರಾಹ್ನ 2ಗಂಟೆಗೆ ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯಲಿದೆ

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಸಹಾಯಕ ಅಭಿಯೋಗ ನಿರ್ದೇಶಕಿ ಮಮ್ತಾಝ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿರುವರು. ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಸುಶೀಲ ಉಪಾಧ್ಯಾಯರವರ ಸಂಸ್ಮರಣ ಕುರಿತು ವಿಶೇಷ ಉಪನ್ಯಾಸ ನೀಡಲಿರುವರು ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಪಂ ಅಧ್ಯಕ್ಷೆ ಅಶ್ವಿನಿ ದಿನೇಶ್, ಡಾ. ಕಾರಂತ ಪ್ರತಿಷ್ಠಾನದ ಟ್ರಸ್ಟಿ ಇಬ್ರಾಹಿಂ ಕೋಟ, ಕಾರ್ಯದರ್ಶಿ ನರೇಂದ್ರ ಕೋಟ, ಕರ್ನಾಟಕ ಹಜ್ ಸಮಿತಿಯ ಮಾಜಿ ಸದಸ್ಯ ಸಲೀಂ ಅಂಬಾಗಿಲು ಭಾಗವಹಿಸಲಿರುವರು.

ಇದನ್ನೂ ಓದಿ : ಉಡುಪಿ :ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವುದು ಕಂಡುಬ0ದಲ್ಲಿ ಕಠಿಣ ಕ್ರಮ -Vishwanews24

ಸಂಜೆ 4 ಗಂಟೆಗೆ ಮಹಿಳಾ ಸಾಧಕಿಯರಾದ ಮಮ್ತಾಜ್(ಸಾಮಾಜಿಕ ಸ್ಪಂದನೆ), ಡಾ.ವಾರಿಜ ಎನ್.(ಶೈಕ್ಷಣಿಕ ಕ್ಷೇತ್ರ), ಸುಶೀಲ ಸೋಮಶೇಖರ್ (ಸಂಘಟನೆ), ಡಾ.ಫಿರ್ದೋಸ್(ಶೈಕ್ಷಣಿಕ ಕ್ಷೇತ್ರ), ಡಾ.ಅಪ್ಸರಿ ಬಾನು ಎಂ. (ವೈದ್ಯಕೀಯ ಕ್ಷೇತ್ರ), ಮೀನಾ ಪಿಂಟೊ ಕಲ್ಯಾಣಪುರ(ಸಮಾಜ ಸೇವೆ), ಫರ್ಝಾನ ಎಂ.(ಸಾಮಾಜಿಕ ಸ್ಪಂದನೆ), ಲಲಿತಾ ಪೂಜಾರಿ ಕೊರವಡಿ (ಕರಕುಶಲ ಕಲೆ), ಸುಜಾತಾ ಅಂದ್ರಾದೆ(ಸಿನಿಮಾ, ರಂಗಭೂಮಿ ನಟಿ), ಶೈಲಾ ಎಸ್.ಪೂಜಾರಿ(ಸಾಮಾಜಿಕ ಸ್ಪಂದನೆ), ಮಂಜುಶ್ರೀ ರಾಕೇಶ್ ಕಟಪಾಡಿ (ಪತ್ರಿಕೆ ಮತ್ತು ದೃಶ್ಯ ಮಾಧ್ಯಮ ಸೇವೆ) ಅವರಿಗೆ ಅಭಿನಂದನಾ ಸಮಾರಂಭ ವನ್ನು ಆಯೋಜಿಸಲಾಗಿದೆ.

ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಾಧಕಿಯರನ್ನು ಸನ್ಮಾನಿಸಲಿರುವರು. ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ.ಕುಂದರ್ ಬಹು ಮಾನ ವಿತರಣೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಜಿಲ್ಲಾ ಮಟ್ಟದ ಮೆಹಂದಿ ಸ್ಪರ್ಧೆ ಮತ್ತು ಸಂಗೀತ ಕುರ್ಚಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಬಳಿಕ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24

ಮೆಹಂದಿ ಸ್ಪರ್ಧೆಯು ಅರಬಿಕ್ ಮತ್ತು ಭಾರತೀಯ ಶೈಲಿ ಎರಡು ವಿಭಾಗದಲ್ಲಿ ನಡೆಯಲಿದೆ. ಈ ಸ್ಪರ್ಧಾ ವಿಜೇತರಿಗೆ ಪ್ರತ್ಯೇಕವಾಗಿ ಪ್ರಥಮ 3,000 ರೂ., ದ್ವಿತೀಯ 2,000ರೂ., ತೃತೀಯ 1,000ರೂ. ಹಾಗೂ ನಾಲ್ಕು ಮಂದಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಸಂಗೀತ ಕುರ್ಚಿ ಸ್ಪರ್ಧೆಯಲ್ಲಿ ಪ್ರಥಮ 1,000ರೂ., ದ್ವಿತೀಯ 500ರೂ. ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವವರು ಮಾ.19ರೊಳಗೆ ದೂರವಾಣಿ ಸಂಖ್ಯೆ 7829729340, 7483946578 ನೊಂದಾವಣೆ ಮಾಡಿಕೊಳ್ಳಬೇಕು. ಕಾರ್ಯಕ್ರಮವನ್ನು ಅಕಾಡೆಮಿ ಮತ್ತು ಥೀಂ ಪಾಕ್‌ನ ಯೂಟುಬ್ ಚಾನಲ್ ಹಾಗೂ ಫೇಸ್ಬುಕ್ನಲ್ಲಿ ನೇರ ಪ್ರಸಾರ ಮಾಡಲಾಗು ವುದು ಎಂದು ಪೂರ್ಣಿಮ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಇದನ್ನೂ ಓದಿ : ಉಡುಪಿ : ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲಾ ಇಲಾಖೆಗಳ ಜವಾಬ್ದಾರಿ : ಡಾ.ಅಂತೋನಿ ಸಬಾಸ್ಟಿಯನ್ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

15 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

15 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

15 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

15 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

16 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

16 hours ago