Featured

ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24

ಉಡುಪಿ: ಮಾ 27ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ಸಿಗ್ನಾ ಹೆಲ್ತ್ ಕಾರ್ಡ್ ಮತ್ತು ವಿದ್ಯಾರ್ಥಿ ವೇತನ ವಿತರಣೆ -Vishwanews24

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಮತ್ತು ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಪಾಲಿಸಿ ಇವರ ಸಹೋಗದೊಂದಿಗೆ ಸದಸ್ಯರಿಗೆ ಉಚಿತ ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಕಾರ್ಡ್ ಹಾಗೂ ಫೆಡರೇಷನ್ ವತಿಯಿಂದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಾರ್ಚ್ 27ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರು ಮುಳಿಹಿತ್ಲುವಿನ ಫೆಡರೇಷನ್ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.

ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24

ಸಮಾರಂಭದ ಉದ್ಘಾಟನೆಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮಖ್ಯ ಅತಿಥಿಗಳಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಐ.ಒ.ಸಿ. ಚೀಫ್ ಡಿವಿಜನಲ್ ರಿಟೇಲ್ ಸೇಲ್ಸ್ ಮ್ಯಾನೇಜರ್ ಅನೂಪ್ ಕುಶ್ವಾ, ಕಾಂಚನ ಹ್ಯುಂಡೈನ ಆಡಳಿತ ನಿರ್ದೇಶಕರಾದ ಪ್ರಸಾದ್ರಾಜ್ ಕಾಂಚನ್, ಎಂ. ಎಸ್.ಇ. ಝಡ್ ಮಂಗಳೂರಿನ ಸೀನಿಯರ್ ಜನರಲ್ ಮ್ಯಾನೇಜರ್ ಶ್ರೀನಿವಾಸಲು ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ಬೆಳಗಾವಿ ಲೋಕಸಭಾ ಉಪಚುನಾವಣೆ: ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಅಭ್ಯರ್ಥಿ -Vishwanews24

ಪ್ರಸ್ತುತ ಸಾಲಿನಲ್ಲಿ ಫೆಡರೇಷನ್ ವತಿಯಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 747 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರೂ. 10,11, 600 ಮೊತ್ತದ ವಿದ್ಯಾರ್ಥಿ ವೇತನ ಹಾಗೂ 1510 ಸದಸ್ಯ ಕುಟುಂಬಗಳಿಗೆ ರೂ. 22,65,000 ವೆಚ್ಚದಲ್ಲಿ ಉಚಿತ ಮಣಿಪಾಲ್ ಸಿಗ್ನಾ ಪ್ರೋಹೆಲ್ತ್ ಇನ್ಶ್ಯೂರೆನ್ಸ್ ಕಾರ್ಡ್ ವಿತರಿಸುವುದಾಗಿ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಮಂಗಳೂರು : ಮೀನಿನಂಗಡಿಗೆ ತಂದಿದ್ದ ರೀಫ್ ಕೋಡ್ ಫಿಶ್ ಹೊಟ್ಟೆಯಲ್ಲಿ ಬರೋಬ್ಬರಿ 10 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ಪತ್ತೆ ! -Vishwanews24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 hour ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago