ಉಡುಪಿ

ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24

ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 27 ರಂದು ಮೆಘಾ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾüಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ /ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ : ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24

ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

13 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

18 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

24 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago