ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಮಾರ್ಚ್ 27 ರಂದು ಮೆಘಾ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.
ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾüಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ /ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜೀಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ : ಉಡುಪಿ : ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣವಾಗಲಿ : ವನಿತಾ ಗುರುದತ್ -Vishwanews24
ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್. ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…