ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಾ.4 ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾಹಿತಿ ನೀಡಿದರು.
ಅಂದು ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿಯರಿಂಗ್ ಪದವಿಧರರು ಇದರ ಪ್ರಯೋಜನವನ್ನು ಪಡೆಯಿರಿ 56 ಕಂಪೆನಿಗಳು ಆಗಮಿಸಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು ಎಂದು ತಿಳಿಸಿದರು.
ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಪ್ರಾಂಶುಪಾಲ ರೂಪೇಶ್ ಕುಮಾರ್ ಮಾತನಾಡಿ, ಪಾಸ್ ಹಾಗು ಫೇಲ್ ಆದವರಿಗೂ ಭಾಗವಹಿಸುವ ಅವಕಾಶ ಇದೆ. 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ. ಮಾ.4 ರಂದು ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಈಗಾಗಲೇ 600 ಕ್ಕೂ ಅಧಿಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಣಿ ಮಾಡಿಸಿದ್ದಾರೆ. ಕಳೆದ ಬಾರಿಯ ಉದ್ಯೋಗ ಮೇಳದಲ್ಲಿ 170 ಅಭ್ಯರ್ಥಿಗಳಿಗೆ ಉತ್ತಮ ಕಂಪೆನಿಯಲ್ಲಿ ಉದ್ಯೋಗ ಲಭಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಬಾಲಕೃಷ್ಣ ಶೆಟ್ಟಿ, ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಓಬು ಪೂಜಾರಿ ಪಂದುಬೆಟ್ಟು, ಕಾರ್ಯದರ್ಶಿ ಭಾಸ್ಕರ್ ಸುವರ್ಣ, ಸಂಚಾಲಕ ಪ್ರಮೋದ್ ಉಪಸ್ಥಿತರಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…