ಉಡುಪಿ : ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ ನಿಧನ – Vishwanews24
ಉಡುಪಿ ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ ನಿಧನ
ಉಡುಪಿ: ನಗರದ ಪ್ರಸಿದ್ಧ ವೈದ್ಯರು, ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ(67) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಉಡುಪಿಯ ಕಲ್ಪನಾ ಚಿತ್ರಮಂದಿರ ಬಳಿ ಇರುವ ಮಿತ್ರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯಾಗಿ ರೋಗಿಗಳಿಗೆ ನಗುಮೋಗದ ಸೇವೆ ನೀಡುತ್ತಿದ್ದ ಇವರು ಡಿ.17 ರಂದು ಮನೆಯಲ್ಲಿ ಕುಸಿದು ಬಿದ್ದಿದ್ದರು.
ಕಾರ್ಕಳ :ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ – Vishwanews24
ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನ ಕಾಯಿಲೆಗೆ ತುತ್ತಾಗಿದ್ದ ಇವರು ನಲ್ವತ್ತು ದಿನಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೊಳ್ಳ ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಮೂವರು ವೈದ್ಯರಾದ ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪಡೆದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24
