Featured

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗಾಗಿ ಉಡುಪಿಯ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಆಡಳಿತ ನಿರ್ವಹಣೆ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಐದು ವರ್ಷಗಳಿಗೆ ₹25 ಸಾವಿರ ಕೋಟಿ ಮೀಸಲಿಟ್ಟಿದ್ದು, ರಾಜ್ಯ ಸರಕಾರದ ಮೂಲಕ ಉಡುಪಿ ಜಿಲ್ಲೆಯ ಮೀನುಗಾರರೂ ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ತರಬೇತಿ ಶಿಬಿರಗಳು ಒಂದು ದಿನಕ್ಕೆ ಸೀಮಿತವಾಗಬಾರದು. ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಶಿಬಿರದಲ್ಲಿ ಪಾಲ್ಗೊಂಡು, ಸರ್ಕಾರದ ಹೊಸ ಯೋಜನೆಗಳ ಮಾಹಿತಿಯನ್ನು ಮೀನುಗಾರರಿಗೆ ತಲುಪಿಸಬೇಕು. ಆಗ ಮಾತ್ರ ಯೋಜನೆಯ ಪ್ರಯೋಜನ ಮೀನುಗಾರರಿಗೆ ಸಿಗುತ್ತದೆ ಎಂದು ಹೇಳಿದರು.ಮೀನುಗಾರರಿಗೆ ನಿಗದಿತ ಕೆಲಸದ ಸಮಯ ಇರುವುದಿಲ್ಲ. ಆದ್ದರಿಂದ ಅಧಿಕಾರಿಗಳು ಅವರ ಅನುಕೂಲದ ಸಮಯದಲ್ಲಿ ಭೇಟಿ ನೀಡಿ ಯೋಜನೆಗಳ ಮಾಹಿತಿ ನೀಡಬೇಕು.

ಜಿಲ್ಲೆಯ 70ಕ್ಕೂ ಹೆಚ್ಚು ಮೀನುಗಾರರ ಸಹಕಾರಿ ಸಂಘಗಳಿಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಕಾರ್ಯವೂ ನಡೆಸಬೇಕು ಎಂದು ಸಲಹೆ ನೀಡಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಅಲೆವೂರು ಹರೀಶ್ ಕಿಣಿ ಹಾಗೂ ಎಚ್. ಗಂಗಾಧರ ಶೆಟ್ಟಿ ಉಪಸ್ಥಿತರಿದ್ದರು.

ಮೀನುಗಾರಿಕಾ ಸಹಾಯಕ ನಿರ್ದೇಶಕಿ ರೆನಿಟಾ ಡಿಸೋಜಾ ಅವರು ಮೀನುಗಾರಿಕಾ ಇಲಾಖೆಯ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಸಂತೋಷ್ ಶೆಟ್ಟಿ ಅವರು ‘ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸ್ವಾಗತಿಸಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago