ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…