Featured

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಉಡುಪಿ: ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ : ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ -Vishwanews24

ಉಡುಪಿ: ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರಯುತವಾಗಿ ಬೆಳೆದು ಬಂದವ. ಸಮಸ್ಯೆ ಅರಿತು ಸಚಿವರು ಸರ್ಕಾರಕ್ಕೆ ಸಹಕಾರ ಕೊಡಬೇಕು ಎಂದು ಮೀನುಗಾರಿಕೆ ಬಂದರು ಸಚಿವ ಎಸ್ ಅಂಗಾರ ಕಿವಿಮಾತು ಹೇಳಿದ್ದಾರೆ.

ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಆರು ಅವಧಿಗೆ ಜನ ಗೆಲ್ಲಿಸಿದರು. ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ. ಹೀಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದರು.

ಇದನ್ನೂ ಓದಿ : ಕೋವಿಡ್-19ರ ಅಲೆಯನ್ನು ತಗ್ಗಿಸುವಲ್ಲಿ ಜನರ ಸಹಕಾರದೊಂದಿಗೆ ಶ್ರಮಿಸಿ ಸರ್ಕಾರ ಯಶಸ್ವಿಯಾಗಿದೆ : ರಾಜ್ಯಪಾಲ ವಜುಭಾಯಿ​​​ ವಾಲಾ -Vishwanews24

ಸರ್ಕಾರದ ಒಳಗಿರುವ ಎಲ್ಲರಿಗೂ ಒಂದೇ ರೀತಿ ಆಲೋಚನೆ ಇರಬೇಕು. ನಮ್ಮ ಆಲೋಚನೆಯಲ್ಲಿ ವ್ಯತ್ಯಾಸ ಆದರೆ ರಾಜ್ಯಕ್ಕೆ ಸಮಸ್ಯೆ ಬರುತ್ತದೆ. ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ ಎಂದು ಅಸಮಾಧಾನಿತ ಸಚಿವರಿಗೆ ಅಂಗಾರ ಚಿವುಟಿದರು.

ಈಗಷ್ಟೇ ಮೀನುಗಾರಿಕೆ ಬಂದರು ಒಳನಾಡು ಖಾತೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಕೆಲದಿನಗಳ ಕಾಲ ಕಾರ್ಯವ್ಯಾಪ್ತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುತ್ತೇನೆ. ಮೀನುಗಾರರ ಬೇಡಿಕೆ ಸಮಸ್ಯೆಗಳನ್ನು ಅರಿತುಕೊಂಡು ಅವರ ಹಿತ ಕಾಪಾಡುವ ಕೆಲಸವನ್ನು ಮಾಡುತ್ತೇನೆ. ಬಂದರು ಮೀನುಗಾರರ ಕುಟುಂಬ ಸಮುದ್ರತೀರಕ್ಕೆ ಮುಂದಿನ ದಿನಗಳಲ್ಲಿ ಭೇಟಿಕೊಟ್ಟು ಅನುಭವವನ್ನು ಪಡೆದುಕೊಳ್ಳುತ್ತೇನೆ ಎಂದು ಈ ಸಂದರ್ಭದಲ್ಲಿ ಸಚಿವ ಅಂಗಾರ ಹೇಳಿದರು

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago