ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಮೀನುಗಾರಿಕೆ ಇಲಾಖೆಯು ಪ್ರಸಕ್ತ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಮೀನುಗಾರರಿಗೆ ಉಚಿತವಾಗಿ ‘ಮೀನುಗಾರಿಕಾ ಸಲಕರಣೆ ಕಿಟ್‌ಗಳನ್ನು ವಿತರಿಸಲಾಗುವುದು. ಇದರೊಂದಿಗೆ, ಮೀನು ಮಾರಾಟವನ್ನು ಸುಲಭಗೊಳಿಸಲು ‘ಮತ್ಸವಾಹಿನಿ’ ಯೋಜನೆಯಡಿ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ಖರೀದಿಗೆ ಧನಸಹಾಯ ನೀಡಲಾಗುತ್ತಿದ್ದು, ಕರಾವಳಿ ತಾಲೂಕುಗಳ ಮೀನುಗಾರರ ಸುರಕ್ಷತೆಗಾಗಿ ಉಚಿತ ಜೀವರಕ್ಷಕ ಸಾಧನಗಳನ್ನು ಸಹ ವಿತರಿಸಲಾಗುತ್ತಿದೆ. ಈ ಎಲ್ಲಾ ಯೋಜನೆಗಳನ್ನು ಅತ್ಯಂತ ಪಾರದರ್ಶಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತರು ಜುಲೈ 31ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಆನ್‌ಲೈನ್ ಅರ್ಜಿ ಸಲ್ಲಿಕೆಯ ನಂತರ ಅದರ ಮೂಲ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಉಡುಪಿ, ಕುಂದಾಪುರ ಅಥವಾ ಕಾರ್ಕಳದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…