Featured

ಉಡುಪಿ : ಮೀನುಗಾರಿಕೆ ಸಚಿವರಿಂದ ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ಧನ ವಿತರಣೆ – vishwanews24

ಉಡುಪಿ : ಮೀನುಗಾರಿಕೆ ಸಚಿವರಿಂದ ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ಧನ ವಿತರಣೆ

ಉಡುಪಿ : ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ರವರ ಮನೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ರವರು ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀನುಹಿಡಿಯುವ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಕಾಲು ಜಾರಿ ಸಮುದ್ರದಲ್ಲಿ ಬಿದ್ದು, ಅಸ್ವಸ್ಥರಾಗಿದ್ದ ನೀಲಾಧರ ಜಿ ತಿಂಗಳಾಯ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಸಹ ಉಳಿಸಿಕೊಳ್ಳಲಾಗಲಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮೃತ ಕುಟುಂಬದ ಮನೆಗೆ ಭೇಟಿ ನೀಡಿ ಅಗತ್ಯ ಸಹಕಾರ ನೀಡಿದ್ದಾರೆ. ಭಟ್ಕಳ, ಮುರ್ಡೇಶ್ವರ ಸೇರಿದಂತೆ ಉಡುಪಿಯಲ್ಲಿಯೂ ಸಹ ಇಂತಹ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿರುವುದು ಅತೀವ ನೋವು ತಂದಿದೆ ಎಂದ ಅವರು, ಮೃತ ಮೀನುಗಾರರ ಕುಟುಂಬಕ್ಕೆ ಸರಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ನೀಡಲಾಗುವುದು ಎಂದರು.

6 ಲಕ್ಷ ರೂ. ಇದ್ದ ಪರಿಹಾರದ ಹಣವನ್ನು ವಿಶ್ವ ಮೀನುಗಾರಿಕೆ ದಿನದಂದು 10 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಇಂದು ಪರಿಹಾರದ ಹಣವನ್ನು ಕುಟುಂಬದವರಿಗೆ ವಿತರಿಸಿದ್ದೇವೆ ಹಾಗೂ ಪ್ರಪ್ರಥಮಬಾರಿಗೆ ದೋಣಿ, ಇಂಜಿನ್, ಬಲೆಯ ಖರೀದಿಗೆ ಸಹ 5 ಲಕ್ಷ ರೂ. ನೀಡಲಾಗಿದೆ. ಕರಾವಳಿ ಭಾಗದಲ್ಲಿ ಇಂತಹ ದುರಂತ ಮತ್ತೆ ಮರುಕಳಿಸದಂತೆ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಹವಾಮಾನ ಇಲಾಖೆಯಿಂದ ನೀಡಲಾಗುವ ಮುನ್ಸೂಚನೆಗಳನ್ನು ಪಾಲಿಸಬೇಕು ಎಂದ ಅವರು, ಸಮುದ್ರ ಪ್ರಕ್ಷಬ್ಧವಾಗಿರುವುದರಿಂದ ಕರಾವಳಿ ಭಾಗದ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

13 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago