ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಫೆಡರೇಶನ್ ಸದಸ್ಯರ ಮಕ್ಕಳು 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇತರ ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2024-25ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿರಬೇಕು.
ದಿನಾಂಕ: 15.07.2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ಈ ಬಗ್ಗೆ ಮಾಹಿತಿಗಾಗಿ 63649 31790 ಸಂಪರ್ಕಿಸಬಹುದು. ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…