Featured

ಉಡುಪಿ: ಮೀನು ಮಾರಾಟ ಫೆಡರೇಷನ್ ವತಿಯಿಂದ  ಡಿ. 26ರಂದು  ಪ್ರತಿಭಾ ಪುರಸ್ಕಾರ ; ಅಭಿನಂದನಾ ಸಮಾರಂಭ: ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಮೀನು ಮಾರಾಟ ಫೆಡರೇಷನ್ ವತಿಯಿಂದ  ಡಿ. 26ರಂದು  ಪ್ರತಿಭಾ ಪುರಸ್ಕಾರ ; ಅಭಿನಂದನಾ ಸಮಾರಂಭ: ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮಂಗಳೂರು ವತಿಯಿಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಗರ ಸಭೆ, ತಾಲೂಕು ಪಂಚಾಯತ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದನಾ ಸಮಾರಂಭ ಡಿಸೆಂಬರ್ 26ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಸಭಾಭವನದಲ್ಲಿ ನಡೆಯಲಿದೆ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸುವರು. ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮಖ್ಯ ಅತಿಥಿಗಳಾಗಿ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಹಾಗೂ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಮತ್ತು ಉಪಾಧ್ಯಕ್ಷ ಶರತ್ ಬೈಲಕರೆ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಮಂಜುನಾಥ ಎಸ್. ಕೆ., ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಸುವರ್ಣ, ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಉದ್ಯಮಿ ಆನಂದ ಪಿ. ಸುವರ್ಣ, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಮ ಕುಂದರ್ ಕೋಟ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಸುಂದರ ಜೆ. ಕಲ್ಮಾಡಿ, ಎಡ್ಲಿನ್ ಕರ್ಕಡ ಭಾಗವಹಿಸುವರು ಎಂದು ಫೆಡರೇಷನ್ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ದತ್ತು ಸ್ವೀಕಾರ:
ಮೀನುಗಾರಿಕೆ ವಿಷಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಫೆಡರೇಷನ್ ವತಿಯಿಂದ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ನಿರ್ಧರಿಸಿದ್ದು, ವಿದ್ಯಾರ್ಥಿಯ ವ್ಯಾಸಾಂಗದ ಸಂಪೂರ್ಣ ವೆಚ್ಚವನ್ನು ಫೆಡರೇಷನ್ ಮೂಲಕ ಭರಿಸಲಾಗುವುದು ಎಂದು ಅವರು‌ ತಿಳಿಸಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

10 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

10 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

10 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

12 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

12 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

13 hours ago