ಉಡುಪಿ

ಉಡುಪಿ : ಮುಂಗಾರು ಆರಂಭ ; ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.10-13ರ ವರೆಗೆ ‘ಯೆಲ್ಲೊ ಅಲರ್ಟ್‌’ – Vishwanews24

ಉಡುಪಿ : ಮುಂಗಾರು ಆರಂಭ ; ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.10-13ರ ವರೆಗೆ ‘ಯೆಲ್ಲೊ ಅಲರ್ಟ್‌’ – Vishwanews24

ಬೆಂಗಳೂರು: ಮುಂಗಾರು ಆರಂಭ ಗೊಂಡಿರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.10ರಿಂದ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಐದು ದಿನಗಳ ಹಿಂದೆ ರಾಜ್ಯ ಪ್ರವೇಶಿಸಿದ್ದ ಮುಂಗಾರು, ಎರಡು ದಿನ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಸಿತ್ತು.

ಈಗ ಕರಾವಳಿ ಭಾಗದಲ್ಲಿ ಮತ್ತೆ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ. ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೂರೂ ದಿನ ‘ಯೆಲ್ಲೊ ಅಲರ್ಟ್‌’ ಘೋಷಿಸಿರುವುದಾಗಿ ಇಲಾಖೆ ತಿಳಿಸಿದೆ.

‘ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಈ ವಾರ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಸಾಧಾರಣ ಮಳೆಯಾಗಬಹುದು’ ಎಂದೂ ಹೇಳಿದೆ.

ಕಾರವಾರ ಹಾಗೂ ಕೋಲಾರ ಜಿಲ್ಲೆಯ ಮುಳಬಾಗಿಲು ಭಾಗದಲ್ಲಿ ಸೋಮವಾರ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರ್ಗಿ, ವಿಜಯಪುರ, ಬೀದರ್‌, ಹಾಸನದಲ್ಲಿ ತಲಾ 34 ಹಾಗೂ ಚಿಕ್ಕಮಗಳೂರಿನಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago